22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿಸಿನಿಮಾ

ನೀಟ್ ಪ್ರತಿಭಟನೆ ಬಿಸಿ: ರಾಮಾಯಣ ಟ್ರೇಲರ್ ಬಿಡುಗಡೆ ಮುಂದಕ್ಕೆ..!

ನಟ ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸಿ, ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ದಿಢೀರ್ ಮುಂದೂಡಲ್ಪಟ್ಟಿದೆ. ಶುಕ್ರವಾರ ದೆಹಲಿಯ ಭಾರತ್ ಮಂಟಪದಲ್ಲಿ ಮಾಧ್ಯಮಗಳಿಗೆ ಪ್ರೀಮಿಯರ್ ಪ್ರದರ್ಶಿಸಿದ ಬಳಿಕ ಅಧಿಕೃತವಾಗಿ ಜಾಗತಿಕ ಮಟ್ಟದಲ್ಲಿ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ, ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದೇಶದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಸೇರಿದಂತೆ ಹಲವೆಡೆ ಯುವಜನರು ಹಾಗೂ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ದೇಶದ ಪ್ರಸ್ತುತ ಪರಿಸ್ಥಿತಿಗೆ ಸ್ಪಂದಿಸಿರುವ ‘ರಾಮಾಯಣ’ ಸಿನಿಮಾ ತಂಡ, ತಮ್ಮ ಅಧಿಕೃತ ಖಾತೆಯಲ್ಲಿ ಯುವಸಮೂಹವನ್ನು ಉದ್ದೇಶಿಸಿ ವಿಶೇಷ ಸಂದೇಶ ರವಾನಿಸಿದೆ.ನಮ್ಮ ದೇಶದ ಯುವಜನರೇ ನಮ್ಮ ಭವಿಷ್ಯ, ಆ ಭವಿಷ್ಯವನ್ನು ರಕ್ಷಿಸಲು ನಾವೆಲ್ಲರೂ ನಮ್ಮಿಂದಾದ ಅತ್ಯುತ್ತಮ ಪ್ರಯತ್ನವನ್ನು ಮಾಡೋಣ ಎಂದು ಬರೆದಿದೆ.

ವಿದ್ಯಾರ್ಥಿಗಳ ಭವಿಷ್ಯ ಮತ್ತು ಅವರ ಹಕ್ಕುಗಳ ಬೆಂಬಲಕ್ಕೆ ನಿಲ್ಲುವ ನಿಟ್ಟಿನಲ್ಲಿ ಟ್ರೇಲರ್ ಬಿಡುಗಡೆಯನ್ನು ಮುಂದಕ್ಕೆ ಹಾಕಿರುವುದಾಗಿ ಚಿತ್ರತಂಡ ಸ್ಪಷ್ಟಪಡಿಸಿದೆ. ಭಾರತೀಯ ಚಿತ್ರರಂಗದ 100 ವರ್ಷಗಳ ಇತಿಹಾಸದಲ್ಲೇ ಈ ಸಿನಿಮಾ ಮಹತ್ತರ ಮೈಲಿಗಲ್ಲಾಗಲಿದೆ ಎಂದು ಚಿತ್ರತಂಡ ಭರವಸೆ ನೀಡಿದೆ. ನಿರ್ಮಾಪಕರಾದ ಯಶ್ ಮತ್ತು ನಮಿತ್ ಮಲ್ಹೋತ್ರಾ ಅವರು ಭಾರತದ ಸಂಸ್ಕೃತಿ ಹಾಗೂ ರಾಮಾಯಣದ ಮಹಾಕಾವ್ಯವನ್ನು ಜಗತ್ತಿಗೆ ತಲುಪಿಸಲು ಅಮೆರಿಕದ ಪ್ರತಿಷ್ಠಿತ ಸಿನಿಮಾಕಾನ್ ಫೆಸ್ಟಿವಲ್‌ನಲ್ಲೂ ಭಾರಿ ಪ್ರಚಾರ ನಡೆಸಿದ್ದಾರೆ.

ಈ ಬಾರಿಯ ದೀಪಾವಳಿ ಹಬ್ಬದ ಶುಭಸಂದರ್ಭದಲ್ಲಿ ವಿಶ್ವದಾದ್ಯಂತ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಟ್ರೇಲರ್ ಬಿಡುಗಡೆಯ ಹೊಸ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲವಾದರೂ, ಪ್ರಪಂಚದಾದ್ಯಂತ ಇರುವ ಚಲನಚಿತ್ರ ಪ್ರೇಮಿಗಳು ಟ್ರೇಲರ್ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ : ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ನಟಿ ತ್ರಿಷಾ

Related posts

ಅಕ್ಕಿಯಲ್ಲಿ ಹುಳುಗಳಾಗದಂತೆ ನೋಡಿಕೊಳ್ಳುವುದು ಹೇಗೆ ಗೊತ್ತಾ..?

kknewskannada1987@gmail.com

ಕರಾವಳಿಯಲ್ಲಿ ಭಾರೀ ಮಳೆ – ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

Kalpana Editor

‘ಸಮಂತಾ ತಾಯಿ ಆಗುತ್ತಿರುವುದು ನಿಜ’ ಕೊನೆಗೂ ಗುಡ್ ನ್ಯೂಸ್..!

Kalpana Editor