28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ಬಿರುಗಾಳಿ ಸಹಿತ ಭಾರೀ ಮಳೆ; ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ..!

ಹಾಸನ : ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ.

ಸಕಲೇಶಪುರ ತಾಲೂಕಿನಲ್ಲಿಯೂ ಧಾರಾಕಾರವಾಗಿ ಮಳೆಯಾಗುತ್ತಿದ್ದು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜಿಗೆ ರಜೆ ಘೋಷಿಸಿ ತಹಶೀಲ್ದಾರ್ ಸುಪ್ರಿತಾ ಆದೇಶ ಹೊರಡಿದ್ದಾರೆ. ಇದನ್ನೂ ಓದಿ : ಮುಂಬೈನಲ್ಲಿ ಮಳೆಯ ರೌದ್ರನರ್ತನ; ಇಂದು 43 ರೈಲು ಸಂಚಾರ ರದ್ದು..!

Related posts

ರಾಂಚಿಯ ಆರ್‌ಎಸ್‌ಎಸ್‌ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

Kalpana Editor

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ..!

Kalpana Editor

ಮುದ್ದಾದ ಕಂದಮ್ಮನ ಮೇಲೆ ತೆಂಗಿನಕಾಯಿ ಬಿದ್ದು ಮಗು ಸಾವು..!

Kalpana Editor