August 2, 2026
kranthikidi.com
ತಾಜಾಸುದ್ದಿರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ..!

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‌ಯೆಲ್ಲೋ ಅಲರ್ಟ್ ಘೋಷಿಸಿದೆ.

ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ‌ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ : ಕನಕಪುರಕ್ಕೆ ಡಿಕೆಶಿ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂದ ಸಿಎಂ

64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್‌ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್‌ ಅಲರ್ಟ್‌ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗುತ್ತದೆ.

Related posts

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಇಂದು 43 ರೈಲು ಸಂಚಾರ ರದ್ದು..!

Kalpana Editor

ಊಹಾತ್ಮಕವಾಗಿ ನೀರಿನ ಲೆಕ್ಕ ಹಾಕಿ; ಪ್ರಾಧಿಕಾರದ ಆದೇಶದ ವಿರುದ್ಧ ಗಂಭೀರ ಪ್ರಶ್ನೆ ಎತ್ತಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Kalpana Editor

ಬಿಜೆಪಿ ಶಾಸಕನ ಆಪ್ತನಿಗೆ ಚಾಕುವಿನಿಂದ ಇರಿತ..!

Kalpana Editor