20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜುಲೈ 18) ಮಧ್ಯಾಹ್ನ ಸುಮಾರು 3:30ರ ನಂತರ ಬೆಂಗಳೂರು ನಗರದ ಕೇಂದ್ರ ಭಾಗ ಹಾಗೂ ಸುತ್ತಮುತ್ತಲಿನ ಹಲವು ಪ್ರಮುಖ ಬಡಾವಣೆಗಳಲ್ಲಿ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಆರಂಭವಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡುವಂತಾಗಿದೆ.

ನಗರದ ಹೃದಯಭಾಗವಾದ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತ, ವಸಂತನಗರ, ಶೇಷಾದ್ರಿಪುರಂ, ಟೌನ್‌ಹಾಲ್, ಕೆ.ಆರ್. ಮಾರುಕಟ್ಟೆ (ಮಾರ್ಕೆಟ್) ಮತ್ತು ಚಾಮರಾಜಪೇಟೆ. ರಾಜಾಜಿನಗರ, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ ಹಾಗೂ ಮಾಗಡಿ ರಸ್ತೆ ಸುತ್ತಮುತ್ತಲಿನ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.

ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿದ್ದ ಪಾದಚಾರಿಗಳು ಹಾಗೂ ಬೈಕ್ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದರು. ಮಳೆಯಿಂದ ರಕ್ಷಣೆ ಪಡೆಯಲು ಛತ್ರಿ ಇಲ್ಲದ ಜನರು ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳ ಮುಂದೆ ಸಾಲು ಗಟ್ಟಿ ನಿಂತಿದ್ದಾರೆ. ಶನಿವಾರವಾದ್ದರಿಂದ ಮಾಗಡಿ ರಸ್ತೆ ಮತ್ತು ಮಾರ್ಕೆಟ್ ರಸ್ತೆಗಳಲ್ಲಿ ವಾಹನಗಳ ಸಂಚಾರ ದಟ್ಟವಾಗಿತ್ತು. ಅನಿವಾರ್ಯವಾಗಿ ಬೈಕ್ ಸವಾರರು ಮಳೆಯಲ್ಲೇ ನೆನೆಯುತ್ತಾ ವಾಹನ ಚಲಾಯಿಸಬೇಕಾಯಿತು.

ಮಳೆಯಿಂದ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ವೀಕೆಂಡ್ ಸಮಯವಾಗಿರುವುದರಿಂದ ಸಂಜೆಯ ವೇಳೆಗೆ ರಸ್ತೆಗಳಲ್ಲಿ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ಮಳೆಯು ರಾಜಧಾನಿಯ ಜನತೆಗೆ ಸೆಕೆಯಿಂದ ಕೊಂಚ ನಿರಾಳತೆ ತಂದಿದ್ದರೂ, ರಸ್ತೆಗಿಳಿದ ಪ್ರಯಾಣಿಕರಿಗೆ ಮಾತ್ರ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ : ಕಣ್ಣಿನ ಆರೋಗ್ಯ ಕಾಪಾಡಲು ಆಹಾರದಲ್ಲಿ ಬೀಜಗಳನ್ನು ಸೇವನೆ ಮಾಡಿ..!

Related posts

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Kalpana Editor

ಮದ್ಯದಂಗಡಿಗೆ ನುಗ್ಗಿದ ಚಿರತೆ, ಮೂವರ ಮೇಲೆ ಭೀಕರ ದಾಳಿ..!

Kalpana Editor

ಸಂಭ್ರಮದ ಕೆಂಪೇಗೌಡ ಜಯಂತಿ; ನಾಡಪ್ರಭುವಿಗೆ ವಂದಿಸಿದ ಸಿಎಂ ಡಿ.ಕೆ. ಶಿವಕುಮಾರ್

Kalpana Editor