21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಮಲೆನಾಡು ಭಾಗದಲ್ಲಿ ಭಾರೀ ಮಳೆ; ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ, ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ನೆನ್ನೆ (ಭಾನುವಾರ) ಮಧ್ಯಾಹ್ನದಿಂದ ಕಾಫಿನಾಡ ಮಲೆನಾಡಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಆದೇಶ ಹೊರಡಿಸಿದ್ದಾರೆ.

ಭಾರೀ ಗಾಳಿಗೆ ಮರ ಬಿದ್ದು, ಮಲೆನಾಡಿನಾದ್ಯಂತ ತೀವ್ರ ಅನಾಹುತ ಸಂಭವಿಸಿದ್ದು, ರಸ್ತೆಗೆ ಬೃಹತ್ ಮರಗಳು ಬಿದ್ದು, ಹತ್ತಾರು ಗ್ರಾಮಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ಮಲೆನಾಡ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿದೆ. ಭಾರಿ ಮಳೆ ಜೊತೆ ಬೀಸುತ್ತಿರುವ ರಣ ಗಾಳಿಗೆ ಮಲೆನಾಡಿಗರು ಕಂಗಾಲಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ; ಎಸ್‍ಐಆರ್ ದುರ್ಬಳಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕು – ಬಿ.ವೈ.ವಿಜಯೇಂದ್ರ

Related posts

ನಿರ್ದೇಶಕನ ಜೊತೆ ಹಸೆಮಣೆ ಏರಿದ ಖ್ಯಾತ ನಟಿ ಸ್ವಾತಿ ರೆಡ್ಡಿ

Kalpana Editor

ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ..!

Kalpana Editor

ಇಂದು ಡಿಕೆ ಶಿವಕುಮಾರ್‌ಗೆ ಪಟ್ಟಾಭಿಷೇಕ – ಶಕ್ತಿಶಾಲಿ ಮಾಲವ್ಯ ಯೋಗದ ಮುಹೂರ್ತ..!

Kalpana Editor