20.8 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ – ಉಡುಪಿಗೆ ಆರೆಂಜ್ ಅಲರ್ಟ್ ಘೋಷಣೆ..!

ಉಡುಪಿ : ಜಿಲ್ಲೆಯಾದ್ಯಂತ ಬಿರುಸಿನ ಮಳೆ ಮುಂದುವರಿದ ಹಿನ್ನೆಲೆ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಜನರು ಹಾಗೂ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ನಿರಂತರವಾಗಿ ಬಿರುಸಿನ ಮಳೆ ಸುರಿಯುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮಳೆ ಮುಂದುವರಿದಿದ್ದು, ಜನಜೀವನದ ಮೇಲೆ ಅದರ ಪರಿಣಾಮ ಕಾಣಿಸತೊಡಗಿದೆ. ಸಮುದ್ರದಲ್ಲಿ ಗಂಟೆಗೆ 40ರಿಂದ 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಯನ್ನು ಆರಂಭಿಸದಂ ತೆ ಸೂಚಿಸಲಾಗಿದೆ. ಇನ್ನೊಂದೆಡೆ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ಮನವಿ ಮಾಡಿವೆ. ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ : ಜೀ ಸಂಸ್ಥೆಯ ಮೇಲೆ ಭಾರಿ ದಂಡ; ನಿಷೇಧ ಹೇರಿದ ವಿಧಿಸಿದ ಸೆಬಿ

Related posts

ಎಲಿವೇಟೆಡ್ ಕಾರಿಡಾರ್ ಹೆಸರಿನಲ್ಲಿ ಬೆಂಗಳೂರಿಗರ ಮೇಲೆ ಮತ್ತೊಂದು ತೆರಿಗೆ ದರೋಡೆ; ಜನವಿರೋಧಿ ನಿರ್ಧಾರವನ್ನು ತಕ್ಷಣ ಹಿಂಪಡೆಯಿರಿ – ಆಮ್ ಆದ್ಮಿ ಪಕ್ಷ ಆಗ್ರಹ..!

Kalpana Editor

ಬೆಂಗಳೂರಿಗರೇ ಗಮನಿಸಿ; 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್…!

Kalpana Editor

ಬಿಡದಿ ಟೌನ್‌ಶಿಪ್ ಸರ್ವೆಗೆ ಬಂದವರಿಗೆ ಪೊರಕೆ ಪೂಜೆ, ಸ್ಥಳದಲ್ಲಿ ಉದ್ವಿಗ್ನತೆ – ಅಧಿಕಾರಿಗಳ ವಾಹನಕ್ಕೆ ಹಾನಿ, ರೈತರ ಆಕ್ರೋಶ..!

Kalpana Editor