21.6 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಭಾರೀ ಮಳೆ – ನುಗ್ಗಿದ ನೀರು, ಇತ್ತ ಬೃಹತ್ ಮರಗಳು ಧರಾಶಾಹಿ..!

ಚಾಮರಾಜನಗರ/ಚಿಕ್ಕಮಗಳೂರು : ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಜನ ಪರದಾಡುವಂತಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಳ್ಯದಬಯಲಿನಲ್ಲಿ ಭಾರೀ ಮಳೆಯಾಗಿದೆ. ಈ ಪರಿಣಾಮ ಭಾಷಾ ಎಂಬುವವರಿಗೆ ಮನೆಗೆ ನೀರು ನುಗಿದ್ದು, ನೀರು ಹೊರಹಾಕಲು ಕುಟುಂಬಸ್ಥರು ರಾತ್ರಿಯಿಡಿ ಪರದಾಡಿದ್ದಾರೆ. ಜೊತೆಗೆ ಮನೆಯಲ್ಲಿದ್ದ ಧವಸಧಾನ್ಯಗಳಿಗೂ ನೀರು ಸೇರಿ, ಅಪಾರ ಪ್ರಮಾಣ ಹಾನಿಯುಂಟಾಗಿದೆ.

ಚಿಕ್ಕಮಗಳೂರು ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದ್ದು, ನಗರದಾದ್ಯಂತ ನಾನಾ ಅವಾಂತರ ಸೃಷ್ಟಿಯಾಗಿದೆ. ಗಾಳಿ-ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕೋಟೆ ಬಡಾವಣೆಯಲ್ಲಿ ಮನೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿದ್ದು, ಕೋರ್ಟ್ ಮುಂಭಾಗ ಹತ್ತಾರು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಐಬಿ ಮುಂಭಾಗದ ಕಾಂಪೌಂಡ್ ಕೂಡ ಕುಸಿದಿದ್ದು, ಚಿಕ್ಕಮಗಳೂರು ನಗರದ ಅರ್ಧಭಾಗದಲ್ಲಿ ವಿದ್ಯುತ್ ಸಂಪರ್ಕ ಕಟ್ ಆಗಿದೆ.

Related posts

ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

Kalpana Editor

ಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ; ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿ

kknewskannada1987@gmail.com

ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Kalpana Editor