22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಕೊಡಗಿನಲ್ಲಿ ಮಳೆಯ ಅಬ್ಬರ; ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ ಬಿರುಸು ಪಡೆಯುತ್ತಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಗಾಳಿ ಮಳೆ ಚುರುಕು ಪಡೆದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ.

ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. 3,700 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುತ್ತಿದೆ. ಮತ್ತೆ ಮಳೆ ಚುರುಕಾದ ಹಿನ್ನಲೆ ಕೊಡಗಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಇಂದು 3ನೇ ಆಷಾಢ ಶುಕ್ರವಾರದ ಸಂಭ್ರಮ; ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

Related posts

ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು..!

Kalpana Editor

ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿದ್ಯುತ್‌ ಕಂಬಕ್ಕೆ ಡಿಕ್ಕಿ, ತಪ್ಪಿದ ಅನಾಹುತ..!

Kalpana Editor

ನ್ಯಾಯವಾಗಿ ಬದುಕಿದರೆ ಜೈಲಿನ ಭಯ ಯಾಕೆ..? ನನ್ನ ಪ್ರಶ್ನೆಗೆ ಉತ್ತರ ಕೊಡಿ – ಸಿಎಂಗೆ ನಿಖಿಲ್ ಸವಾಲು

Kalpana Editor