20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ – ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗಿದೆ. ವಾಲಗಳ್ಳಿ ಬಳಿಯ ರಾಜ್ಯ ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿದ ಪರಿಣಾಮ ಆತ್ಮಲಿಂಗ ಸ್ಪರ್ಶ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮಧ್ಯಾಹ್ನ 12:30 ರ ಮಹಾಪೂಜೆ ಮಾಡಲಾಗದಷ್ಟು ಸಮಸ್ಯೆಯಾಗಿದೆ. ಗೋಕರ್ಣದ ಬೀದಿಗಳು ಹಳ್ಳದಂತಾಗಿವೆ. ಇದರಿಂದ ಪ್ರವಾಸಿಗರಿಗೆ ಭಾರಿ ಕಿರಿಕಿರಿಯಾಗಿದೆ. ಚರಂಡಿಯ ಹೂಳು ತೆಗೆಯದ ಹಿನ್ನೆಲೆ ಸಮಸ್ಯೆ ಉಂಟಾಗಿದೆ. ಕೇವಲ ಒಂದು ದಿನದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ.

ಕುಮಟಾ ತಾಲೂಕಿನಾದ್ಯಂತ ಅಬ್ಬರದ ಮಳೆಯಾಗಿದ್ದು, ವಾಲಗಳ್ಳಿ ಬಳಿಯ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಕುಮಟಾದಿಂದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಹಳ್ಳದಂತಾದ ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಇದನ್ನೂ ಓದಿ : ನಿಶ್ಚಿತಾರ್ಥ ಮಾಡಿಕೊಂಡ ನಟಿ ಶರ್ಮಿಳಾ ಮಾಂಡ್ರೆ – ಫೋಟೋಗಳು ವೈರಲ್..!

Related posts

ಲೈಂಗಿಕ ದೌರ್ಜನ್ಯ ಪ್ರಕರಣ; ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ

kknewskannada1987@gmail.com

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ; ಚಿನ್ನದ ಪಲ್ಲಕ್ಕಿ, ವಿಶೇಷ ಪೂಜೆ ಸಲ್ಲಿಕೆ..!

Kalpana Editor

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ; 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆ..!

Kalpana Editor