27.5 C
ಬೆಂಗಳೂರು
October 9, 2026
kranthikidi.com
ತಾಜಾಸುದ್ದಿರಾಜ್ಯ

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ..!

ಚಿಕ್ಕಬಳ್ಳಾಪುರ : ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಆಕ್ರೋಶಿತರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ರು. ಇಷ್ಟಾದ್ರೂ ಗಲಾಟೆ ಮುಂದುವರೆದಿದೆ. ಕಾರ್ಯಕ್ರಮದಿಂದ ತಮ್ಮ ಬೆಂಬಲಿಗರೊಂದಿಗೆ ಹೊರ ನಡೆದ ಪ್ರದೀಪ್ ಈಶ್ವರ್ ವಿರೋಧಿಗಳಿಗೆ ತೊಡೆ ತಟ್ಟಿ ಪಂಥಾಹ್ವಾನ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಕನ್ನಡ ಭವನದ ಮುಂದೆ ಹೈಡ್ರಾಮವೇ ಸೃಷ್ಟಿಯಾಗಿದೆ. ಒಕ್ಕಲಿಗ ಯುವಕರು, ಪ್ರದೀಪ್ ಈಶ್ವರ್ ಬೆಂಬಲಿಗರ ನಡುವೆ ಗಲಾಟೆ ತಾರಕಕ್ಕೆರಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ : ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆ ಹಣದ ದುರುಪಯೋಗದ ಬಗ್ಗೆ ಖರ್ಗೆ ಸ್ಪಷ್ಟನೆ..!

Related posts

ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ..!

Kalpana Editor

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್ – 6 ಕಡೆ ದಾಳಿ..!

Kalpana Editor

ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್‌ ಕಮಿಷನರೇಟ್ – ಸಿಎಂ ಡಿಕೆಶಿ ಮಹತ್ವದ ಘೋಷಣೆ..!