26.4 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಮಳೆ ಅಬ್ಬರಕ್ಕೆ ಹಳಿ ಮೇಲೆ ಗುಡ್ಡ ಕುಸಿತ – ರೈಲು ಸಂಚಾರ ಸ್ಥಗಿತ..!

ಹಾಸನ : ಸಕಲೇಶಪುರದಲ್ಲಿ ಮಳೆ ಅಬ್ಬರಕ್ಕೆ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್‌ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ. ಅಲ್ಲದೇ ನಡುರಾತ್ರಿ ಪ್ರಯಾಣಕ್ಕೆ ಪರ್ಯಾಯ ಮಾರ್ಗ ಹುಡುಕಲು ಪ್ರಯಾಣಿಕರು ಪರದಾಡಿದ್ದಾರೆ.

ಸಕಲೇಶಪುರದ ಯಡಕುಮಾರಿ – ಶಿರವಾಗಿಲು ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಎಲ್ಲಾ ರೈಲುಗಳ ಸಂಚಾರ ಬಂದ್ ಮಾಡಲಾಗಿದೆ. ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ರೈಲುಗಳನ್ನು ನಿಲ್ಲಿಸಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ರೈಲಿನಲ್ಲಿದ್ದ ಪರೀಕ್ಷಾರ್ಥಿಗಳು ಹಾಗೂ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಹಣ ಹಿಂದಿರುಗಿಸಿ ಬಸ್ ವ್ಯವಸ್ಥೆ ಕಲ್ಪಿಸುತ್ತಿದೆ. ರೈಲು ಬಂದ್‌ನಿಂದ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಬೆಂಗಳೂರು-ಮುರಡೇಶ್ವರ, ಬೆಂಗಳೂರು-ಕೋಜಿಕೋಡ್, ವಿಜಯಪುರ-ಮಂಗಳೂರು ರೈಲುಗಳು ಹಾಸನದಲ್ಲಿ ನಿಲುಗಡೆ.

ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಸಕಲೇಶಪುರದಲ್ಲಿ ನಿಲುಗಡೆ. ಮುರಡೇಶ್ವರ-ಬೆಂಗಳೂರು, ಮಂಗಳೂರು-ವಿಜಯಪುರ ರೈಲುಗಳು ಸುಬ್ರಹ್ಮಣ್ಯದಲ್ಲಿ ನಿಲುಗಡೆ. ಕೋಜಿಕೋಡ್ ಬೆಂಗಳೂರು ರೈಲು ಪುತ್ತೂರಿನಲ್ಲಿ ನಿಲುಗಡೆ. ಪ್ರಯಾಣಿಕರಿಗೆ ರೈಲು ರದ್ದತಿ ಬಗ್ಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಇಂದು (ಆ. 2) ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ್ ಬಂದ್ ಮಾಡಲಾಗಿದೆ. ಇದನ್ನೂ ಓದಿ : ಕೆಆರ್‌ಎಸ್‌ ನೀರಿನ ಮಟ್ಟ ಹೆಚ್ಚು – ಎರಡೇ ದಿನದಲ್ಲಿ 5 ಅಡಿ ಏರಿಕೆ..!

Related posts

ಇಂದು ಡಿಕೆ ಶಿವಕುಮಾರ್‌ಗೆ ಪಟ್ಟಾಭಿಷೇಕ – ಶಕ್ತಿಶಾಲಿ ಮಾಲವ್ಯ ಯೋಗದ ಮುಹೂರ್ತ..!

Kalpana Editor

ಬದರಿನಾಥ್ ದೇಣಿಗೆ ಕಳವು – ಪ್ರಮುಖ ಆರೋಪಿ ಡೆಹ್ರಾಡೂನ್‌ನಲ್ಲಿ ಬಂಧನ..!

Kalpana Editor

ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ..!

Kalpana Editor