20.9 C
ಬೆಂಗಳೂರು
September 21, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ; 7 ಮಂದಿ ಬಂಧನ..!

ಗಾಂಧಿನಗರ : 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಳಿಕ ಪತಿಯ ಸ್ನೇಹಿತರು ಮಹಿಳೆಯ ಮೇಲೆ 10 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಈ ತಿಂಗಳ ಆರಂಭದಲ್ಲಿ ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ನಾಪತ್ತೆ ಪ್ರಕರಣದ ತನಿಖೆ ವೇಳೆ ಬೆಳಕಿಗೆ ಬಂದಿದೆ. ಮೇ 11ರಂದು ಪತಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಆದರೆ ದೂರು ನೀಡಿದ ಎರಡು ದಿನಗಳಲ್ಲೇ ಆತನು ಕೂಡ ನಾಪತ್ತೆಯಾಗಿದ್ದ.

ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಬಳಿಕ ಪತಿಯನ್ನು ಪತ್ತೆ ಹಚ್ಚಿದ ಪೊಲೀಸರು, ನಂತರ ಮಹಿಳೆಯನ್ನೂ ರಕ್ಷಿಸಿದ್ದಾರೆ. ಪೊಲೀಸರ ಮುಂದೆ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿ, ಪತಿ ತನ್ನ ಸ್ನೇಹಿತರಿಗೆ ನನ್ನನ್ನು 50 ಸಾವಿರ ರೂ.ಗೆ ಮಾರಾಟ ಮಾಡಿದ್ದ. ಬಳಿಕ ಅವರು 10 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ.

ಇದೇ ವೇಳೆ ಆರೋಪಿಗಳು ತನ್ನ ಚಿನ್ನಾಭರಣಗಳನ್ನು ಕಸಿದು ಸ್ಥಳೀಯ ಜುವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ಹೇಳಿಕೆ ಆಧರಿಸಿ ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಮಾನವ ಕಳ್ಳಸಾಗಣೆ, ಕ್ರಿಮಿನಲ್ ಸಂಚು ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಪತಿ ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.‌

Related posts

ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌..!

Kalpana Editor

ರುಕ್ಮಿಣಿ ವಸಂತ್ AI ಬಿಕಿನಿ ಫೋಟೋ ವೈರಲ್ ಕೇಸ್ – ಆರೋಪಿ ರಂಜಿತ್

Kalpana Editor

ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ..!

Kalpana Editor