22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ನಾನು ನಿಷ್ಠಾವಂತ ಕಾರ್ಯಕರ್ತ – ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ; ಪ್ರದೀಪ್ ಈಶ್ವರ್

ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಸಮಾಧಾನದ ನಡುವೆ ಶಾಸಕ ಪ್ರದೀಪ್ ಈಶ್ವರ್‌ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ, ಕಾಂಗ್ರೆಸ್ ನಮ್ಮ ಗರ್ಭಗುಡಿ ಎಂದರು.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ನಮ್ಮ ನಾಯಕರು. ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.

ಜೈ ಕಾಂಗ್ರೆಸ್. ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ನನಗೆ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು. ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಿಗಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ : ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ – ಪ್ರಿಯಾಂಕ್ ಖರ್ಗೆ

Related posts

ಡ್ರಗ್ಸ್‌ ನೀಡಿ ಮಹಿಳೆ ಮೇಲೆ ಅತ್ಯಾಚಾರ, ಬಲವಂತದ ಮತಾಂತರ – ಇಬ್ಬರು ಬಂಧನ..!

Kalpana Editor

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ; ಸಿಎಂ ಡಿಕೆ ಶಿವಕುಮಾರ್

Kalpana Editor

ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ; ರಾಹುಲ್ ವಿರುದ್ಧ ಧರ್ಮೇಂದ್ರ ವಾಗ್ದಾಳಿ..!

Kalpana Editor