ಬೆಂಗಳೂರು : ಮಹಾತ್ಮಾ ಗಾಂಧೀ ಅವರು ಹಳ್ಳಿಗಳೇ ಈ ದೇಶದ ಆತ್ಮ, ಗ್ರಾಮಾಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದು, ಅವರ ಕನಸು ನನಸು ಮಾಡುವ ಖಾತೆ ಲಭಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿ ಆಗಬೇಕು, ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆ ಆಗಬೇಕು ಎಂಬ ಸಂಕಲ್ಪದೊಂದಿಗೆ ತಾವು ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ತಮಗೆ ಲಭಿಸಿರುವ ಖಾತೆಯಲ್ಲಿ ಪ್ರಾಮಾಣಿಕ ಸೇವೆ ಮಾಡಲು ಹಗಲಿರುಳು ಶ್ರಮಿಸುತ್ತಿರುವುದಾಗಿ ಹೇಳಿದ ಖಂಡ್ರೆ, ತಮಗೆ ಸಚಿವಸ್ಥಾನ ನೀಡಿ, ಇಂತಹ ಉತ್ತಮ ಜವಾಬ್ದಾರಿ ನೀಡಿದ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಎಲ್ಲ ವರಿಷ್ಠರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ಇದನ್ನೂ ಓದಿ : ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ – ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ; ಸಚಿವ ಸಂತೋಷ ಲಾಡ್
