25.3 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಈಡುಗಾಯಿ ಚಳವಳಿ; ವಾಟಾಳ್ ನಾಗರಾಜ್ ಘೋಷಣೆ..!

ಬೆಂಗಳೂರು : ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸರ್ವಾಧಿಕಾರ, ದಬ್ಬಾಳಿಕೆ, ಭ್ರಷ್ಟಾಚಾರ ಹಾಗೂ ಜೆಸಿಬಿ ಸಂಸ್ಕೃತಿಯನ್ನು ವಿರೋಧಿಸಿ ಬೆಂಗಳೂರು–ರಾಮನಗರ–ಮೈಸೂರು ಮಾರ್ಗದಲ್ಲಿ “ಈಡುಗಾಯಿ ಚಳವಳಿ” ನಡೆಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ವಾಟಾಳ್ ನಾಗರಾಜ್ ಅವರು, ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 21 ದಿನಗಳ ಕಾಲ ಸತ್ಯಾಗ್ರಹ ನಡೆಸಿದ್ದರೂ, ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿರುವ ಕ್ರಮ ಪ್ರಜಾಪ್ರಭುತ್ವ ವಿರೋಧಿ ಹಾಗೂ ತೀವ್ರ ಖಂಡನೀಯ ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳು ಮತ್ತು ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸಿದ್ದು, ಈ ಬೆಳವಣಿಗೆಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕಾಗಿತ್ತು ಎಂದು ಅವರು ಒತ್ತಾಯಿಸಿದರು. ದೇಶದಲ್ಲಿ ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಭ್ರಷ್ಟಾಚಾರ, ಲೂಟಿ ಹಾಗೂ ದಬ್ಬಾಳಿಕೆ ಹೆಚ್ಚಾಗಿದ್ದು, ಪ್ರಜಾಪ್ರಭುತ್ವದ ಸಂಸ್ಥೆಗಳು ದುರ್ಬಲಗೊಳ್ಳುತ್ತಿವೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು. ಇದನ್ನೂ ಓದಿ : ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ನಗರಸಭೆ ವಿರುದ್ಧ ಪೋಷಕರ ಆಕ್ರೋಶ..!

Related posts

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ..!

Kalpana Editor

ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್

kknewskannada1987@gmail.com

ಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ – ಛಲವಾದಿ ನಾರಾಯಣಸ್ವಾಮಿ

kknewskannada1987@gmail.com