29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಶಾಸಕರು ರಾಜೀನಾಮೆ ಕೊಟ್ಟರೆ, ನಿಮಿಷದಲ್ಲಿ ಅಂಗೀಕಾರ; ಸಿಎಂ ಡಿಕೆಶಿ

ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಈಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ ಎಂದು ಪ್ರಶ್ನಸಿದ್ದಾರೆ.

ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಖಡಕ್‌ ಎಚ್ಚರಿಕೆ ರವಾನಿಸಿದ್ದಾರೆ. ಇದೇ ವೇಳೆ ತಕ್ಷಣದಿಂದಲೇ ನಿಗಮ ಮಂಡಳಿಗಳ ನೇಮಕಾತಿ ರದ್ದು ಮಾಡಿ ಅವರು ಆದೇಶ ಹೊರಡಿಸಿದ್ದಾರೆ.

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ಹಲವು ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಈ ಬಗ್ಗೆ ಬೆಂಬಲಿಗರ ಜೊತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದ್ದರು. ಇದೀಗ ಅಸಮಾಧಾನಿತ ಶಾಸಕರು ರಾಜೀನಾಮೆ ಕೊಟ್ಟರೆ ಅಂಗಿಕರಿಸುವಂತೆ ಸೂಚಿಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ : ದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ; ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು

Related posts

We Want Sanju – ಆಟಗಾರರ ಮುಂದೆ ಆಕ್ರೋಶ ಹೊರಹಾಕಿದ ಅಭಿಮಾನಿಗಳು

Kalpana Editor

ಬಿಡದಿ ಟೌನ್‌ಶಿಪ್‌ ಜಟಾಪಟಿ; ಸರ್ವೆಗೆ ಬಂದ ಅಧಿಕಾರಿಗಳಿಗೆ ವಿರುದ್ಧ ರೈತರು ಆಕ್ರೋಶ..!

Kalpana Editor

ಸಿನಿಮಾ ಪೈರಸಿ ತಡೆಯಲು ಹೊಸ ಪ್ಲ್ಯಾನ್​​ನೊಂದಿಗೆ ಬಂದ ಕೇಂದ್ರ ಸರ್ಕಾರ..!

Kalpana Editor