24.8 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿವಿದೇಶ

ಕದನ ವಿರಾಮದ ನಡುವೆ ಮತ್ತೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ; 5 ಮಂದಿ ಸಾವು..!

ಬೈರುತ್ : ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, 5 ಜನ ಮೃತಪಟ್ಟಿದ್ದಾರೆ. ಇಸ್ರೇಲಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು, ಬೆಳಗಿನ ಜಾವದವರೆಗೆ ನಬತಿಯೇಹ್ ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳ ಮೇಲೆ ಸರಣಿ ದಾಳಿ ನಡೆಸಿವೆ ಎಂದು ಲೆಬನಾನ್ ತಿಳಿಸಿದೆ.

ದಕ್ಷಿಣ ಲೆಬನಾನ್‌ನಲ್ಲಿ ಭೀಕರ ಸಮರ ನಡೆಸಿದ್ದ, ಇಸ್ರೇಲ್ ಹಾಗೂ ಇರಾನ್ ಬೆಂಬಲಿತ ಲೆಬನಾನ್‌ನ ಹೆಜ್ಬೊಲ್ಲಾ ಉಗ್ರರು ಕದನ ವಿರಾಮ ಒಪ್ಪಂದಕ್ಕೆ ಬಂದಿದ್ದರು. ಅಮೆರಿಕ ಹಾಗೂ ಕತಾರ್‌ನ ಮಧ್ಯಸ್ಥಿಕೆಯಲ್ಲಿ ಇರಾನ್‌ನ ಸಹಕಾರದೊಂದಿಗೆ ಇದು ಜಾರಿಗೆ ಬಂದಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದರು. ಒಂದು ದಿನದ ಹಿಂದೆಯಷ್ಟೇ ಲೆಬನಾನ್‌ನ ನಬತಿಯೇಹ್ ಜಿಲ್ಲೆಯಾದ್ಯಂತ ಶುಕ್ರವಾರ ನಡೆದಿದ್ದ ದಾಳಿಯಲ್ಲಿ 16 ಜನ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದರು. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿಯಲ್ಲಿ ಕಾಣೆಯಾಗಿದ್ದರು.

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಪ್ರಕಾರ, ಲೆಬನಾನ್ ಸೇರಿದಂತೆ ಎಲ್ಲಾ ಕಡೆ ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು. ಜೊತೆಗೆ ಲೆಬನಾನ್ ದೇಶದ ಸಾರ್ವಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆ ಗೌರವಿಸಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಇದೀಗ ಇಸ್ರೇಲ್ ಪುನಃ ಲೆಬನಾನ್ ಮೇಲೆ ಭೀಕರ ದಾಳಿ ನಡೆಸುತ್ತಿರುವುದು ಶಾಂತಿ ಒಪ್ಪಂದ ಮುರಿದು ಬೀಳುತ್ತಾ ಎನ್ನುವ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ : ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ..!

Related posts

ಉಡುಪಿ ಶ್ರೀಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ; ಆತ್ಮೀಯ ಸ್ವಾಗತ..!

kknewskannada1987@gmail.com

ಫೇಸ್‌ಬುಕ್‌ನಿಂದ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ

Kalpana Editor

ಅರಣ್ಯ ಸಿಬ್ಬಂದಿ ಶೂಟೌಟ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ..!

kknewskannada1987@gmail.com