22.4 C
ಬೆಂಗಳೂರು
October 6, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ; ಆರ್‌. ಅಶೋಕ್

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ಮಾಹಿತಿ ನೀಡಿದ ವಿಪಕ್ಷ ನಾಯಕ ಅಶೋಕ್, ಹೋರಾಟದಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸಮಾವೇಶಗಳನ್ನು ಆಯೋಜಿಸಲಿವೆ. ಸದನದ ಒಳಗೆ ಈಗಾಗಲೇ ಜೆಡಿಎಸ್, ಬಿಜೆಪಿಯ ಹೋರಾಟಗಳಿಗೆ ಬೆಂಬಲ ನೀಡಿದೆ. ಬರಗಾಲ, ನೈಸ್ ಯೋಜನೆ, ಬಿಡದಿ ಟೌನ್‌ಶಿಪ್ ಮತ್ತು ಕೆಪಿಎಸ್‌ಸಿ ಅಕ್ರಮಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚಿಸಲು ಎರಡೂ ಪಕ್ಷಗಳು ನಿರ್ಧರಿಸಿವೆ. ಈ ಎಲ್ಲಾ ವಿಚಾರಗಳಿಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ನಡೆಯುವ ಎಲ್ಲಾ ಪ್ರಮುಖ ಹೋರಾಟಗಳಲ್ಲೂ ಒಟ್ಟಾಗಿ ಕೆಲಸ ಮಾಡುವ ತೀರ್ಮಾನವನ್ನು ಮಾಡಲಾಗಿದೆ. ಶೀಘ್ರದಲ್ಲೇ ಎರಡು-ಮೂರು ದಿನಗಳಲ್ಲಿ ಸಮನ್ವಯ ಸಮಿತಿ ರಚಿಸಲಾಗುವುದು. ಈ ಸಮಿತಿಯಲ್ಲಿ ಎರಡೂ ಕಡೆಯಿಂದ ತಲಾ ಐದು ಜನ ಸದಸ್ಯರಿರುತ್ತಾರೆ.

ಜಿಲ್ಲಾ ಮಟ್ಟದಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಲಿವೆ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದರ ವಿರುದ್ಧದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಇನ್ನಷ್ಟೇ ಆಗಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ – ಪ್ರಿಯಾಂಕ್ ಖರ್ಗೆ

Related posts

ಇನ್ಮುಂದೆ ನೀಟ್ ಪರೀಕ್ಷೆಗೆ, ಭಾರತೀಯ ಸೇನೆಯ ನೆರವು..!

Kalpana Editor

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ – ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ..!

Kalpana Editor

ಮೈಗ್ರೇನ್ ಸಮಸ್ಯೆಗೂ, ಹೃದಯದ ಆರೋಗ್ಯಕ್ಕೂ ಸಂಬಂಧವಿದೆಯೇ..?!

Kalpana Editor