21.5 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಕರ್ನಾಟಕ ಬಂದ್ ಖಚಿತ; ಅತ್ತಿಬೆಲೆ ಗಡಿ ಬಂದ್ – ವಾಟಾಳ್ ನಾಗರಾಜ್

ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ವಾಟಾಳ್ ನಾಗರಾಜ್, ಕಾವೇರಿ ವಿಚಾರದಲ್ಲಿ ತಮಿಳುನಾಡು ಪದೇಪದೇ ಕ್ಯಾತೆ ತೆಗೆಯುತ್ತಾ ಕಿರುಕುಳ ನೀಡುತ್ತಿದೆ.

ಬೆಂಗಳೂರಿನ ಕುಡಿಯುವ ನೀರಿನ ದಾಹ ತೀರ್ಸಲು ಮೇಕೆದಾಟು ಯೋಜನೆ ತಕ್ಷಣವೇ ಆಗಬೇಕು. ಈ ಯೋಜನೆಗೆ ಯಾರ ಅಪ್ಪಣೆಯೂ ಬೇಕಿಲ್ಲ, ಸರ್ಕಾರ ಕಾವೇರಿ ವಿಚಾರದಲ್ಲಿ ಹುಡುಗಾಟ ಆಡಬಾರದು ಎಂದು ಎಚ್ಚರಿಸಿದ್ದಾರೆ. ಮೇಕೆದಾಟು ಜಾರಿ ಮತ್ತು ಬಿಡದಿ ಟೌನ್ ಶಿಪ್ ಕೈಬಿಡುವಂತೆ ಆಗ್ರಹಿಸಿ ಆಗಸ್ಟ್ 13 ರಂದು ಸಮಗ್ರ ಕರ್ನಾಟಕ ಬಂದ್ ಮಾಡಲಾಗುವುದು.

ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಆದರೆ ಡಿ.ಕೆ ಶಿವಕುಮಾರ್ ಅವರು ನಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಹೀಗಾಗಿ ಬಂದ್ ಕರೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಬಂದ್‌ಗೂ ಮುನ್ನ ಆಗಸ್ಟ್ 10ರ ಸೋಮವಾರದಂದು ಅತ್ತಿಬೆಲೆ ಗಡಿಯನ್ನು ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ : ರಾಜ್ಯದಲ್ಲಿ ಆ.13ರ ವರೆಗೆ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ..!

Related posts

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

Kalpana Editor

ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್‌ ಕಮಿಷನರೇಟ್ – ಸಿಎಂ ಡಿಕೆಶಿ ಮಹತ್ವದ ಘೋಷಣೆ..!

ಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ – ಛಲವಾದಿ ನಾರಾಯಣಸ್ವಾಮಿ

kknewskannada1987@gmail.com