24.2 C
ಬೆಂಗಳೂರು
October 5, 2026
kranthikidi.com
ತಾಜಾಸುದ್ದಿರಾಜ್ಯ

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ..!

ಉಡುಪಿ : ಕೇರಳದ ಸಿಎಂ ವಿ.ಡಿ. ಸತೀಶನ್ ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.

Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ನಂತರ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು.

ಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದ್ದು, ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ.

ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್‌ ಅವರು ಆಗಮಿಸಿದ್ದ, ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ : ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ – ಸಿಎಂ ಡಿಕೆ ಶಿವಕುಮಾರ್

Related posts

ಸಿಜೆಪಿ ಪ್ರತಿಭಟನೆಯಲ್ಲಿ ಹಿಂಸಾಚಾರ; ಆರೋಪಿಗಳ ಪಾಸ್‌ಪೋರ್ಟ್ ರದ್ದು..!

Kalpana Editor

ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ..!

Kalpana Editor

ಧಾರವಾಡದ ಖಾಸಗಿ ಶಾಲೆಯ ಮಕ್ಕಳಿಗೆ ವಿಚಿತ್ರ ಜ್ವರ…!

Kalpana Editor