20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಖರ್ಗೆ RSS ವಿರೋಧಿ ಇಲಾಖೆ ಪಡೆಯಲಿ; ಬಿವೈವಿ ವ್ಯಂಗ್ಯ..!

ಬೆಂಗಳೂರು : ಆರ್‌ಎಸ್‍ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ, ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆರ್‌ಎಸ್‌ಎಸ್‌ ವಿರೋಧಿ ಇಲಾಖೆಯನ್ನು ಪಡೆದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಯ ವ್ಯಂಗ್ಯವಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನೇರವಾಗಿ ಆರ್‌ಎಸ್‌ಎಸ್‌ ಹೆಸರನ್ನು ಉಲ್ಲೇಖಿಸದಿದ್ದರೂ, ಸರ್ಕಾರದ ಕ್ರಮಗಳ ಉದ್ದೇಶ ಸ್ಪಷ್ಟವಾಗಿದೆ. ತಮ್ಮ ಇಲಾಖೆಯ ಜವಾಬ್ದಾರಿಗಳ ಬಗ್ಗೆ ಗಮನಹರಿಸುವ ಬದಲು ಪ್ರಿಯಾಂಕ್‌ ಖರ್ಗೆ ಪದೇಪದೇ ಆರ್‌ಎಸ್‌ಎಸ್‌ ಅನ್ನು ಟೀಕಿಸುವ ಕೆಲಸ ಮಾಡುತ್ತಿದ್ದಾರೆ. ಆರ್‌ಎಸ್‍ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಆರ್‌ಎಸ್‌ಎಸ್‌ ವಿರೋಧಿ ಇಲಾಖೆಯನ್ನು ಪಡೆದುಕೊಳ್ಳಲಿ ಎಂದಿದ್ದಾರೆ.

ಸದನದಲ್ಲಿ ಆರ್‌ಎಸ್‌ಎಸ್‌ನ ಪ್ರಾರ್ಥನೆಯ ಉಲ್ಲೇಖ ಮಾಡಿದ್ದ ಮುಖ್ಯಮಂತ್ರಿಗಳ ನಿಲುವು ಇದೀಗ ಬಯಲಾಗಿದೆ. ನಿಮಗೆ ಧೈರ್ಯವಿದ್ದರೆ ಆರ್‌ಎಸ್‌ಎಸ್‌ ಅನ್ನು ನಿಷೇಧಿಸುವ ಪ್ರಯತ್ನ ಮಾಡಿ. ಆರ್‌ಎಸ್‌ಎಸ್‌ನಿಂದ ಯಾವ ದೇಶವಿರೋಧಿ ಚಟುವಟಿಕೆ ನಡೆದಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಆರ್‌ಎಸ್‌ಎಸ್‌ ಶತಮಾನ ಪೂರೈಸಿರುವ ಸಂಘಟನೆ. ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸೇವಾ ಮನೋಭಾವ ಬೆಳೆಸುವ ಸಂಘಟನೆಯಾಗಿ ಅದು ಕಾರ್ಯನಿರ್ವಹಿಸುತ್ತಿದೆ. ದೇಶದ ಪರವಾಗಿ ಧ್ವನಿ ಎತ್ತುವ ಶಕ್ತಿಗಳಲ್ಲಿ ಆರ್‌ಎಸ್‌ಎಸ್‌ ಪ್ರಮುಖವಾಗಿದೆ.

ಹಿಂಬಾಗಿಲಿನಿಂದ ಆರ್‌ಎಸ್‌ಎಸ್‌ನ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ. ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಎಂದು ಎಚ್ಚರಿಸಿದ್ದಾರೆ. ಹಿಂದೆ ಜವಾಹರಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಅವರ ಅವಧಿಯಲ್ಲಿ ಆರ್‌ಎಸ್‌ಎಸ್‌ ವಿರುದ್ಧ ನಿಷೇಧ ಹೇರಲಾಗಿದ್ದರೂ ಸಂಘಟನೆ ಮತ್ತಷ್ಟು ಬಲಿಷ್ಠವಾಗಿ ಬೆಳೆದಿದೆ. ಇತಿಹಾಸದಿಂದ ಪಾಠ ಕಲಿತು ಸರ್ಕಾರ ಕಾರ್ಯನಿರ್ವಹಿಸಬೇಕು.

ದೇಶದ ಭದ್ರತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಗೃಹ ಸಚಿವರ ಕರ್ತವ್ಯ. ಅಂತಹ ವಿಚಾರಗಳ ಬಗ್ಗೆ ಗಮನಹರಿಸದೇ ಆರ್‍ಎಸ್‍ಎಸ್ ಕುರಿತು ಚರ್ಚೆ ಮಾಡುವುದಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದ್ದಾರೆ. ರಾಜ್ಯದ ಜ್ವಲಂತ ಸಮಸ್ಯೆಗಳು, ಬಡವರ ಸಂಕಷ್ಟ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ಬದಲು ಸರ್ಕಾರ ಅನಗತ್ಯ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ಮಾತುಕತೆ ಏನಿದ್ರೂ ನನ್ನ ಮತ್ತು ವಿದ್ಯಾರ್ಥಿಗಳ ನಡುವೆ; ಬಾರ್‌ಕೌನ್ಸಿಲ್‌ ಹಸ್ತಕ್ಷೇಪಕ್ಕೆ ಸಿಜೆಐ ಕೆಂಡಾಮಂಡಲ..!

Related posts

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಕೋಟಿ ಕೋಟಿ ವಂಚನೆ; ದಂಪತಿ ಬಂಧನ..!

kknewskannada1987@gmail.com

ಮೊದಲ ಓವರ್​ ನಂದೇ..! ಆರ್‌ಸಿಬಿ ಫ್ಯಾನ್ಸ್​ಗೆ ಶಾಕ್ ನೀಡಿದ ವಿರಾಟ್ ಕೊಹ್ಲಿ

Kalpana Editor

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 40 ರಿಂದ 50 ಸಾವಿರ ಜನ..!

Kalpana Editor