23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಹೆಚ್​​ಡಿಕೆ-ಡಿಕೆಶಿಗೆ ಪತ್ರ

ಬೆಂಗಳೂರು : ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ ಅಕ್ರಮಗಳ ಬಗ್ಗೆ ಕುಮಾರಸ್ವಾಮಿಯವರು ಪತ್ರದಲ್ಲಿ ಉಲ್ಲೇಖಿಸಿದ್ದು, ನೈಸ್ ಸಂಸ್ಥೆ ಈ ನೆಲದ ಕಾನೂನು ಹಾಗೂ ಫ್ರೇಮ್​​ ವರ್ಕ್​​ ಅಗ್ರಿಮೆಂಟ್​​ ಉಲ್ಲಂಘಿಸಿದೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

ಕರ್ನಾಟಕ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ತೀರ್ಪುಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಹಾಗೂ ವಿಧಾನಸಭೆ ಸದನ ಸಮಿತಿ ಮತ್ತು ಸಚಿವ ಸಂಪುಟದ ಉಪ ಸಮಿತಿಗಳ ಶಿಫಾರಸುಗಳಲ್ಲಿ ದಾಖಲಿಸಿರುವಂತೆ ನೈಸ್‌ ಸಂಸ್ಥೆ BMICP ಯೋಜನೆ ಅನುಷ್ಠಾನದಲ್ಲಿ ಫ್ರೇಮ್​​ ವರ್ಕ್​​ ಅಗ್ರಿಮೆಂಟ್ ಮತ್ತು ಪ್ರಾಜೆಕ್ಟ್​​ ಟೆಕ್ನಿಕಲ್​​ ಅಗ್ರಿಮೆಂಟ್​​ಗಳಲ್ಲಿರುವ ನಿಬಂಧನೆ ಮತ್ತು ಷರತ್ತುಗಳನ್ನು ಸ್ಪಷ್ಟವಾಗಿ ಉಲ್ಲಂಘಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತತ್‌ಕ್ಷಣ ಜಾರಿಗೆ ಬರುವಂತೆ ನಿಷೇಧಿಸಬೇಕು. ಅಲ್ಲದೆ, ಒಂದು ಶಾಸನವನ್ನು ರಚಿಸುವ ಮೂಲಕ ನೈಸ್ ರಸ್ತೆ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಪತ್ರ ಮುಖೇನ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಫುಡ್ ಟ್ರಕ್‌ನಲ್ಲಿ ಅಡಗುವ ಮುನ್ನ ನಿಮ್ಮ ಭದ್ರತೆ ನೋಡಿಕೊಳ್ಳಿ – ಟ್ರಂಪ್‌ಗೆ ಇರಾನ್ ತಿರುಗೇಟು..!

Related posts

ಕರ್ನಾಟಕಕ್ಕೆ ಮುಂಗಾರು ಎಂಟ್ರಿ – ವರುಣನ ಅಬ್ಬರ, ಧರೆಗುರುಳಿದ ಮರ ಜನಜೀವನ ಅಸ್ತವ್ಯಸ್ತ..!

Kalpana Editor

ಮೂತ್ರನಾಳದ ಸೋಂಕಿನ ಕುರಿತು ನಿರ್ಲಕ್ಷ ಬೇಡ; ತಡೆಗಟ್ಟಲು ಇಲ್ಲಿದೆ ಮಾರ್ಗದರ್ಶನ..

Kalpana Editor

ಗೌಡರಿಗಾಗಿ ಊಟ ಮಾಡದೇ ಕಾಯುತ್ತಿದ್ರು – ಅತ್ತೆ ನೆನೆದು ಅಳಿಯ ಭಾವುಕ..!

Kalpana Editor