August 25, 2026
kranthikidi.com
ತಾಜಾಸುದ್ದಿದೇಶ

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ನವದೆಹಲಿ : ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.

ಈ ಚರ್ಚೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿಯವರ ಮಾರ್ಗದರ್ಶನ ಮಹಾರಾಷ್ಟ್ರದ ಬೆಳವಣಿಗೆಗೆ ಅತ್ಯಂತ ಮುಖ್ಯವಾದುದು. ಈ ಭೇಟಿಯು ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ಅಭಿವೃದ್ಧಿ ದೃಷ್ಟಿಯಿಂದ ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ಅವರು ನೀಡುವ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.

ಪ್ರಧಾನಮಂತ್ರಿಯವರೊಂದಿಗಿನ ಮಾತುಕತೆಯ ಬಳಿಕ ಮುಂಬೈಗೆ ವಾಪಸಾಗಲಿರುವ ಮುಖ್ಯಮಂತ್ರಿಗಳು, ಮಂಗಳವಾರ (ಆ.18) ಮುಂಬೈನ `ದಿ ಲಲಿತ್’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಆಯೋಜಿಸಲಾಗಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.

ಇದೇ ವೇಳೆ ನಿರ್ಮಾಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬೈ-ವಧವನ್ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯಾದ ಉತ್ತನ್-ವಿರಾರ್ ಸಮುದ್ರ ಸೇತುವೆ ನಿರ್ಮಾಣಕ್ಕಾಗಿ ಜಪಾನ್ ಇಂಟರ್‌ನ್ಯಾಷನಲ್ ಕೋಆಪರೇಷನ್ ಏಜೆನ್ಸಿಯಿಂದ ಧನಸಹಾಯವನ್ನು ಪಡೆಯಲು ಅನುಮೋದನೆ ಕೋರಿ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ :

Related posts

ಆರ್‌ಎಸ್‌ಎಸ್‌ಗೆ ಬಿಗ್​​ ಶಾಕ್​​ ಕೊಟ್ಟ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ

Kalpana Editor

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

Kalpana Editor

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Kalpana Editor