24.1 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜ್ಯ

“ಮಜಾಭಾರತ” ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!

ಬೀದರ್ : ಅನುಮಾನಾಸ್ಪದ ರೀತಿಯಲ್ಲಿ “ಮಜಾಭಾರತ ಕಾಮಿಡಿ ರಿಯಾಲಿಟಿ ಶೋ” ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ.

ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ. 3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ನೆನ್ನೆ (ಸೋಮವಾರ) ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದು, ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್‌ ದೂರು ದಾಖಲಿಸಲು ಹೋಗಿದ್ದರು.

ಮೊಬೈಲ್ ಟವರ್ ಲೊಕೆಶನ್‌ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಬಳಿಕ ಶವ ಪರೀಕ್ಷೆಗಾಗಿ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣ‌ ಇನ್ನೂ ತಿಳಿದುಬಂದಿಲ್ಲ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ. ಇದನ್ನೂ ಓದಿ : ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ..!

Related posts

ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು..!

kknewskannada1987@gmail.com

ಬಕ್ರೀದ್‌ಗೆ ಬಲಿ ಕೊಡಲು ಖರೀದಿಸಿದ್ದ, ಟ್ರಂಪ್ ಹೋಲುವ ಎಮ್ಮೆ ಮೃಗಾಲಯಕ್ಕೆ ಶಿಫ್ಟ್..!

Kalpana Editor

ಜೆಡಿಎಸ್‌ನಿಂದ ಡಮ್ಮಿ ಅಭ್ಯರ್ಥಿ ನಿಲ್ಲಿಸಲು ಫಿಕ್ಸಿಂಗ್ ಮಾಡ್ತಿದ್ದವರಿಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ; ಚೆಲುವರಾಯಸ್ವಾಮಿ ವಾಗ್ದಾಳಿ..!

Kalpana Editor