29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಉಪ್ಪಾರ ಶಾಸಕನಿಗೆ ಒಲಿದ ಮಂತ್ರಿಗಿರಿ; 2ನೇ ಬಾರಿಗೆ ಪುಟ್ಟರಂಗಶೆಟ್ಟಿ ಸಚಿವ

ಚಾಮರಾಜನಗರ : ರಾಜ್ಯದ ಏಕೈಕ ಉಪ್ಪಾರ ಶಾಸಕರಿಗೆ ಡಿಕೆ ಸಂಪುಟದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದ ಸಿ.ಪುಟ್ಟರಂಗಶೆಟ್ಟಿ ಕಾಂಗ್ರೆಸ್ ‌ಕಟ್ಟಾಳು.​ ಬಿಎ ಪದವೀಧರರಾಗಿರುವ ಪುಟ್ಟರಂಗಶೆಟ್ಟಿ ಕಳೆದ 47 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದು, ಪತ್ನಿ ವೆಂಕಟಮ್ಮ, ಒಬ್ಬ ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

1973 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಅವಿಭಜಿತ ಮೈಸೂರು ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಳಿಕ ಆಶ್ರಯ ಸಮಿತಿ ಸದಸ್ಯರಾಗಿದ್ದ ಪುಟ್ಟರಂಗಶೆಟ್ಟಿ ಯಳಂದೂರು ತಾಲೂಕು ​ಗೌಡಹಳ್ಳಿ ಮಂಡಲ ಪಂಚಾಯಿತಿಯ ಉಪ ಪ್ರಧಾನ ಹಾಗೂ ಪ್ರಧಾನರಾಗಿಯು ಸೇವೆ ಸಲ್ಲಿಸಿದ್ದರು. ​ಗುಂಬಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಬಳಿಕ ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹಾಗೂ ಚಾಮರಾಜನಗರ ಜಿಪಂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

​ಯಳಂದೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPCMS) ಸದಸ್ಯ ಮತ್ತು ಅಧ್ಯಕ್ಷ, ​ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ​APMC ಸದಸ್ಯರಾಗಿಯು ಸೇವೆ ತಳಮಟ್ಟದಿಂದ ರಾಜಕಾರಣ ಮಾಡುತ್ತಾ ಬಂದ ಪುಟ್ಟರಂಗಶೆಟ್ಟಿ, 2008, 2013, 2018 ಹಾಗೂ‌ 2023 ಹೀಗೆ ಸತತ ನಾಲ್ಕು ಬಾರಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವಾಟಾಳ್ ನಾಗರಾಜ್, ಬೆಂಕಿ ಮಹದೇವು, ವಿ.ಸೋಮಣ್ಣ ಅವರಂತಹ ಘಟಾನುಘಟಿಗಳನ್ನು ಸೋಲಿಸಿರುವ ಪುಟ್ಟರಂಗಶೆಟ್ಟಿ ರಾಜಕೀಯವಾಗಿ ಹಿಂತಿರುಗಿ ನೋಡಿದ್ದೇ ಇಲ್ಲ. 2018 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅಲ್ಲದೇ, 2023 ಚುನಾವಣೆ ಬಳಿ ಉಪ ಸಭಾಪತಿ ಹುದ್ದೆಯನ್ನು ಹೈಕಮಾಂಡ್ ಕೊಟ್ಟಿತ್ತು. ಈ ಹುದ್ದೆ ನಿರಾಕರಿಸಿದ ಪುಟ್ಟರಂಗಶೆಟ್ಟಿ ಸಚಿವ ಸ್ಥಾನಕ್ಕಾಗಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಬಳಿ ಬೇಡಿಕೆಯಿಟ್ಟಿದ್ದರು. ಮುಂದಿನ ಸಂಪುಟ ವಿಸ್ತರಣೆ ವೇಳೆ ಅವಕಾಶ ಕೊಡುವ ಭರವಸೆ ನೀಡಲಾಗಿತ್ತು. ಅದರಂತೆ ಈ ಬಾರಿ ಮಂತ್ರಿಗಿರಿ ಒಲಿದಿದೆ. ಇದನ್ನೂ ಓದಿ : ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ..!

Related posts

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor

ಇಸ್ರೋದಿಂದ 242 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಭ್ಯರ್ಥಿಗಳಿಗೆ ಸುವರ್ಣಾವಕಾಶ..!

kknewskannada1987@gmail.com

RSS ನೋಂದಣಿ ಬಗ್ಗೆ ಮೋಹನ್ ಭಾಗವತ್​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

Kalpana Editor