22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಶಾಸಕ ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ಸಂಪೂರ್ಣ ಬಂದ್‌ಗೆ ಕರೆ..!

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಕರೆ ನೀಡಿರುವ ಬೆಂಬಲಿಗರು, ಪಕ್ಷದ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಬಾಗೇಪಲ್ಲಿಯ ಶಾಸಕ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳನ್ನು ಒಳಗೊಂಡಂತೆ ನಾಳೆ ಸಂಪೂರ್ಣ ಬಂದ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನರೇಂದ್ರ, ʻಆಪರೇಷನ್ ಕಮಲʼದ ವೇಳೆ ಬಿಜೆಪಿ ಸಚಿವ ಸ್ಥಾನ ನೀಡುವ ಆಫರ್ ಮಾಡಿತ್ತು.

ಆದರೂ ಸುಬ್ಬಾರೆಡ್ಡಿ ಕಾಂಗ್ರೆಸ್ ತೊರೆಯಲಿಲ್ಲ. ಈಗ ಕಾಂಗ್ರೆಸ್ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಕಾಶ ನೀಡದೇ ಅವಮಾನ ಮಾಡಿದೆ. ಇದರಿಂದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ತೀವ್ರ ನೋವಾಗಿದೆ. ಅದಕ್ಕಾಗಿ ನಾವು ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ : ನರ್ಸಿಂಗ್ ಆಫೀಸರ್ ಸೇರಿದಂತೆ, ವಿವಿಧ ಹುದ್ದೆಗೆ ಅರ್ಜಿ ಆಹ್ವಾನ..!

Related posts

ಇವತ್ತು ರಾತ್ರಿಯೇ ಸಚಿವ ಸಂಪುಟ ವಿಸ್ತರಣೆ ಫೈನಲ್‌ ಆಗಬಹುದು – ಸಿದ್ದರಾಮಯ್ಯ

Kalpana Editor

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!

Kalpana Editor

ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು..!

Kalpana Editor