21.9 C
ಬೆಂಗಳೂರು
August 7, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

ಬೀದರ್ : ಚಿಕ್ಕಬಳ್ಳಾಪುರದಲ್ಲಿ ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕುಗಳನ್ನು ಬಂದ್ ಮಾಡಿ ಸರ್ಕಾರದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಿರುವುದು ತಪ್ಪು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಕ್ರಿಯಿಸಿದ ಅವರು, ಅಸಮಾಧಾನಗೊಂಡಿರುವ ಶಾಸಕರ ಮನವೊಲಿಸುವ ಕೆಲಸವನ್ನು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮಾಡಲಿದೆ. ಸಚಿವ ಸ್ಥಾನ ಸಿಗದವರಿಗೆ ನಿಗಮ-ಮಂಡಳಿ ಸೇರಿದಂತೆ ಸೂಕ್ತ ಸ್ಥಾನಮಾನಗಳನ್ನು ನೀಡಿ ಸಮಾಧಾನಪಡಿಸುವ ಪ್ರಯತ್ನ ನಡೆಯಲಿದೆ ಎಂದರು.

ಚಿಕ್ಕಬಳ್ಳಾಪುರದ ಹಲವು ತಾಲೂಕುಗಳಲ್ಲಿ ಬಂದ್ ನಡೆಸಲಾಗಿದೆ. ಬೇರೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದರಿಂದ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ ಅಥವಾ ಎಲ್ಲ ಶಾಸಕರು ರಾಜೀನಾಮೆ ಕೊಡುತ್ತಾರೆ ಎಂದು ಅರ್ಥವಲ್ಲ. ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೊನೆಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಕೇವಲ 34 ಸ್ಥಾನಗಳಿವೆ. ಹೀಗಾಗಿ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಆದರೆ, ಬಹುತೇಕ ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ ಎಂದು ಹೇಳಿದರು. ಈ ರೀತಿ ಬಂದ್, ಪ್ರತಿಭಟನೆ ಮಾಡಿ ಸರ್ಕಾರಿ ಆಸ್ತಿಗೆ ಹಾನಿ ಮಾಡುವುದು ಸರಿಯಲ್ಲ. ಎಲ್ಲರೂ ತಾಳ್ಮೆಯಿಂದ ಇದ್ದರೆ ಒಂದಲ್ಲೊಂದು ದಿನ ಅವಕಾಶ ಸಿಗುತ್ತದೆ. ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಮಾತಿಗೆ ಎಲ್ಲರೂ ಗೌರವ ಕೊಡುತ್ತಾರೆ ಎಂದು ಹೇಳಿದರು.

ನಾಯಕರಿಗೆ ಸಚಿವ ಸ್ಥಾನ ಸಿಗದಾಗ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುವುದು ಹೊಸದೇನಲ್ಲ. ಕೆಲವರು ರಾಜೀನಾಮೆ ಕೊಡುವುದು, ಹೋರಾಟ ನಡೆಸುವುದು ಸಹಜ. ಆದರೆ, ಯಾರೇ ಅಸಮಾಧಾನಗೊಂಡಿದ್ದರೂ ಅವರೊಂದಿಗೆ ಹೈಕಮಾಂಡ್ ಮಾತುಕತೆ ನಡೆಸಿ ಮನವೊಲಿಸುವ ಕೆಲಸ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಹಿರಿಯ ನಟ ಪ್ರದೀಪ್ ರಾವತ್ ನಿಧನ; ಖ್ಯಾತಿಯ ಖಳನಟ ಇನ್ನಿಲ್ಲ..!

Related posts

ಇಂದಿನಿಂದ 3 ದಿನ ಮಳೆ ಸಾಧ್ಯತೆ; ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Kalpana Editor

ವಾಹನ ಸವಾರರಿಗೆ ಮತ್ತೊಂದು ಜೀವಭಯ ಎದರು; ಯಶವಂತಪುರ-ತುಮಕೂರು ರಸ್ತೆಯ ಮೇಲ್ಸೇತುವೆ ಶಿಥಿಲಾವಸ್ಥೆ..!

Kalpana Editor

ವಯನಾಡು ಬೆಟ್ಟ ಕುಸಿತ; 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಬೆಟ್ಟ, ಬಂಡೆಗಳ ತೆರವು..!

Kalpana Editor