kranthikidi.com
ತಾಜಾಸುದ್ದಿರಾಜ್ಯ

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಮೋದಿ, ಹೆಚ್‌ಡಿಕೆ ಶುಭಾಶಯ..!

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಎಕ್ಸ್‌ ಖಾತೆಯ ಮೂಲಕ ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ : ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಯತೀಂದ್ರ ಪ್ರಮಾಣ ಸ್ವೀಕಾರ..!

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನ ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Related posts

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; ಆರೆಂಜ್ ಅಲರ್ಟ್​..!

Kalpana Editor

ಪೋಕ್ಸೋ ಪ್ರಕರಣ; ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಆದೇಶ ಮುಂದೂಡಿಕೆ..!

Kalpana Editor

ರಣವೀರ್ ಸಿಂಗ್ 3 ವರ್ಷ ಬ್ಯಾನ್ ಆಗಿಲ್ಲ – ಎಫ್‌ಡಬ್ಲುಐಸಿಇ ಸ್ಪಷ್ಟನೆ..!

Kalpana Editor