23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿದೇಶವಿದೇಶ

ಇಂದಿನಿಂದ ಮೋದಿ ವಿದೇಶಿ ಪ್ರವಾಸ – ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ಗೆ ಭೇಟಿ..!

ನವದೆಹಲಿ : ಇಂದಿನಿಂದ 6 ದಿನಗಳ ಕಾಲ ಪ್ರಧಾನಿ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಜು.6) ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಆರು ದಿನಗಳ ಭೇಟಿಯನ್ನು ಕೈಗೊಂಡಿದ್ದಾರೆ, ಈ ವೇಳೆ ಅವರು ಮೂರು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ ಹಾಗೂ ಇನ್ನಿತರ ಪ್ರಮುಖ ಕ್ಷೇತ್ರಗಳ ಬಗ್ಗೆ ಸಂವಾದ ನಡೆಸಿದ್ದಾರೆ.

ಅಧ್ಯಕ್ಷ ಪ್ರಬೋವೋ ಸುಬಿಯಾಂಟೊ ಅವರ ಆಹ್ವಾನ ಮೇರೆಗೆ ಜು.6ರಿಂದ 8ವರೆಗೆ ಮೋದಿ ಇಂಡೋನೇಷ್ಯಾಗೆ ತೆರಳಿದ್ದು, ಈ ದೇಶಕ್ಕೆ ನೀಡುತ್ತಿರುವ ನಾಲ್ಕನೇ ಭೇಟಿ ಇದಾಗಿದೆ. 2018ರ ಮೇ ಬಳಿಕ ನಡೆಯುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿಯಿದಾಗಿದೆ. ಈ ಸಮಯದಲ್ಲಿ ಜಕಾರ್ತದಲ್ಲಿ ಮೋದಿ ಅನಿವಾಸಿ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಯುನೆಸ್ಕೋ ವಿಶ್ವ ಪರಂಪರೆಯ-ಪಟ್ಟಿಯಲ್ಲಿರುವ ಪ್ರಂಬನನ್ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಇದು ಎರಡೂ ದೇಶಗಳ ನಡುವಿನ ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸಲಿದೆ.

ಇಂಡೋನೇಷ್ಯಾ ಬಳಿಕ ಪ್ರಧಾನಿ ಮೋದಿ ಜುಲೈ 8ರಿಂದ 10ರವರೆಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಆಹ್ವಾನದ ಮೇರೆಗೆ ಮೆಲ್ಬೋರ್ನ್‌ಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ಆಸ್ಟ್ರೇಲಿಯಾದ ಗವರ್ನರ್ ಜನರಲ್ ಸ್ಯಾಮ್ ಮೋಸ್ಟಿನ್ ಎಸಿ ಅವರನ್ನು ಸಹ ಭೇಟಿ ಮಾಡಲಿದ್ದಾರೆ. ಇದೇ ವೇಳೆ ಮೋದಿ ಭಾರತ-ಆಸ್ಟ್ರೇಲಿಯಾ ಸಿಇಒ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು ಎರಡೂ ದೇಶಗಳ ಉನ್ನತ ವ್ಯಾಪಾರ ನಾಯಕರಿರುವ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆಸ್ಟ್ರೇಲಿಯಾ ಭೇಟಿಯ ನಂತರ ಪ್ರಧಾನಿ ಮೋದಿ ಜುಲೈ 10ರಿಂದ 11ರವರೆಗೆ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಭೇಟಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಲಿದ್ದಾರೆ. ಈ ಭೇಟಿಯು ನಾಲ್ಕು ದಶಕಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಮಾಡುವ ಮೊದಲ ರಾಜ್ಯ ಭೇಟಿಯಾಗಿದೆ.

ಆಕ್ಲೆಂಡ್‌ನಲ್ಲಿ, ಪ್ರಧಾನಿ ಮೋದಿ ಅವರು ಪ್ರಧಾನಿ ಲಕ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ, ವಿಶೇಷವಾಗಿ ವ್ಯಾಪಾರ, ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕಂಡಿರುವ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪರಿಶೀಲಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅನಿವಾಸಿ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ : ಮೊದಲ ಬಾರಿ ಮಗನ ಫೋಟೋ ಹಂಚಿಕೊಂಡ ನಟ ಡಾಲಿ ಧನಂಜಯ

Related posts

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ; ಅರ್ಹ ರೈತರ ಖಾತೆಗೆ ಹಣ ಜಮೆ

Kalpana Editor

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ; ಆರೋಪಿ ಪುಣ್ಯೇಶ್ ಅರೆಸ್ಟ್‌..!

Kalpana Editor

ಮಲೇಷ್ಯಾದಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ – ಉಲ್ಲಂಘಿಸಿದ್ರೆ 23 ಕೋಟಿ ದಂಡ

Kalpana Editor