20.8 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿದೇಶಸಿನಿಮಾ

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ದೆಹಲಿ ವಿದ್ಯಾರ್ಥಿಗಳ ಪರ ನಿಂತ ನಟಿ ಆಲಿಯಾ ಭಟ್..!

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಈ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬೆಂಬಲ ಸೂಚಿಸಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ʼಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ತುಂಬಾ ಬೇಸರವಾಗುತ್ತಿದೆ. ಆದರೆ, ಈ ಪರಿಸ್ಥಿತಿ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತೆ ಭರವಸೆಯನ್ನೂ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಮತ್ತು ಹಲವು ವರ್ಷಗಳ ಶ್ರಮ ಇರುತ್ತದೆ. ಅವರು ತಮ್ಮ ಭವಿಷ್ಯಕ್ಕಾಗಿ ಮಾತ್ರವಲ್ಲ, ತಮ್ಮ ನಂತರ ಬರುವ ವಿದ್ಯಾರ್ಥಿಗಳಿಗೂ ಉತ್ತಮ ಭವಿಷ್ಯ ಸಿಗಲೆಂದು ಹೋರಾಟ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಧೈರ್ಯ ನನಗೆ ಪ್ರೇರಣೆ ನೀಡಿದೆ. ದೇಶದ ಭವಿಷ್ಯ ರೂಪಿಸುವ ಯುವಕರ ಮಾತನ್ನು ನಾವು ನಿಜವಾಗಿಯೂ ಕೇಳುತ್ತಿದ್ದೇವೆಯೇ ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳಿಕೊಳ್ಳಬೇಕು. ಭವಿಷ್ಯ ಅವರದ್ದು. ಜೈ ಹಿಂದ್ʼ ಎಂದು ಆಲಿಯಾ ಭಟ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದನ್ನೂಓದಿ : KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ; ಪಶುವೈದ್ಯಾಧಿಕಾರಿ ಹುದ್ದೆ ಸೇಲ್..!

Related posts

ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!

Kalpana Editor

‘ಡಿಕೆಶಿ ಸಿಎಂ ಹುದ್ದೆಗೆ ಅರ್ಹರು’: ಶುರುವಾಯ್ತು ಪೋಸ್ಟರ್ ಅಭಿಯಾನ..!

Kalpana Editor

ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

Kalpana Editor