24.1 C
ಬೆಂಗಳೂರು
October 10, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಲಗೇಜ್‌ ಬ್ಯಾಗಲ್ಲಿ ಡ್ರಗ್ಸ್ ತರ್ತಿದ್ದ ನೈಜೀರಿಯಾ ಪ್ರಜೆಗಳು ಲಾಕ್ – ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ..!

ಬೆಂಗಳೂರು : ಒಂದು ಕಡೆ ಮಾದಕದ್ರವ್ಯ ಮುಕ್ತ ಕರ್ನಾಟಕವನ್ನ ರೂಪಿಸುವ ಗುರಿಯೊಂದಿಗೆ ಸರ್ಕಾರ ಮುಂದಡಿ ಇಟ್ಟಿದೆ. ಅದಕ್ಕಾಗಿ ನಿರಂತರ ಕಠಿಣ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಹೀಗಿದ್ದೂ ಭಾರೀ ಪ್ರಮಾಣದ ಡ್ರಗ್ಸ್‌ ಬೆಂಗಳೂರು ನಗರ ಪ್ರವೇಶಿಸಿರುವುದು ಆತಂಕ ಮೂಡಿಸಿದೆ.

ಲಗೇಜ್‌ ಬ್ಯಾಗ್‌ನಲ್ಲಿ ಅಡಗಿಸಿಟ್ಟುಕೊಂಡು ಡ್ರಗ್ಸ್‌ ತರುತ್ತಿದ್ದ, ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ನಷ್ಟು ಎಂಡಿಎಂಎ ಕ್ರಿಸ್ಟಲ್‌, 4 ಮೊಬೈಲ್‌ ಫೋನ್‌, 2 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ್ದ ಇತರ ವಸ್ತುಗಳನ್ನ ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳು ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದರು. ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಮೆಡಿಕಲ್ ಮತ್ತು ಟೂರಿಸ್ಟ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ನೈಜೀರಿಯಾದಿಂದ ಬೇರೆ ಪೆಡ್ಲರ್ ಗಳಿಂದ ಎಂಡಿಎಂಎ ಕ್ರಿಸ್ಟಲ್ ಬೆಂಗಳೂರಿಗೆ ತರಿಸಿಕೊಳ್ತಿದ್ರು.

ಬಾಡಿಗೆ ಮನೆಯಲ್ಲಿ ಎಲ್ಲಾ ತಯಾರು ಮಾಡಿಕೊಂಡು, ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅನಧಿಕೃತವಾಗಿ ವಾಸವಾಗಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳನ್ನು ಬಂದಿಸಿರುವ ಸಿಸಿಬಿ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ : ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ – ವಿ.ಸೋಮಣ್ಣ

Related posts

ಬೆಂಗಳೂರು ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ – ಸಿಎಂ ಡಿಕೆಶಿ

Kalpana Editor

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ; ಜನಜೀವನ ಅಸ್ತವ್ಯಸ್ತ..!

Kalpana Editor

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆತ..!

Kalpana Editor