August 1, 2026
kranthikidi.com
ತಾಜಾಸುದ್ದಿರಾಜ್ಯ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ – ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮದಿಯ ನಿಟ್ಟುಸಿರು ಬಿಡುವಂತಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯವರೊಂದಿಗೆ ಇಂದು (ಶುಕ್ರವಾರ) ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲರು, ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಶುಲ್ಕವನ್ನು ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯನ್ನು ನಾವು ಒಪ್ಪಿಕೊಂಡಿಲ್ಲ. ಈ ಹಿಂದೆ ಅಂದರೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿದ್ದ ಶುಲ್ಕವು ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಪೋಷಕರು ಮತ್ತು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳವಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಬಾರದು. ಈಗಾಗಲೇ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದಿದ್ದ ನೀಟ್‌ ಪ್ರವೇಶ ಪರೀಕ್ಷೆ ರದ್ದಾಗಿ ಮರುಪರೀಕ್ಷೆ ನಡೆಯಬೇಕಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ ಎಂಬ ತೀರ್ಮಾನ ಮಾಡಲಾಗಿದೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಮಂಡಳಿಯವರು ಶುಲ್ಕ ಹೆಚ್ಚಳ ಮಾಡುವ ಪ್ರಸ್ತಾವನೆಗೆ ನಾವು ಅವಕಾಶವನ್ನೇ ಕೊಟ್ಟಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿಯ ಊಹಾಪೋಹಕ್ಕೆ ಕಿವಿಗೊಡಬಾರದು ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ಮನವಿ ಮಾಡಿದರು. ಇದನ್ನೂ ಓದಿ : ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಜೋಸೆಫ್‌ ವಿಜಯ್‌

Related posts

ʻರಾಮಮಂದಿರ ದೇಣಿಗೆ ಕಳವುʼ ಚರ್ಚೆಗೆ ಒತ್ತಾಯ – ಲೋಕಸಭೆಯಲ್ಲೂ ಗದ್ದಲ, ಕಲಾಪ ಮುಂದೂಡಿಕೆ..!

Kalpana Editor

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ..!

Kalpana Editor

ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪಿಎಸ್ಐ ಅರೆಸ್ಟ್‌..!

Kalpana Editor