25.3 C
ಬೆಂಗಳೂರು
October 7, 2026
kranthikidi.com
ತಾಜಾಸುದ್ದಿರಾಜ್ಯ

ನಮಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು; ಡಿಸಿಎಂ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು..!

ಬೆಂಗಳೂರು : ಕರ್ತವ್ಯದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡ ಗ್ರಾಮ ಆಡಳಿತಾಧಿಕಾರಿ ಭುವನಾ ಅವರ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತುಮಕೂರಿನ ಗೂಳೂರಿನ ಬಳಿ ನಡೆದ ಲಾರಿ ಅಪಘಾತದಲ್ಲಿ ವಿಎ ಭುವನಾ ಅವರು ಮೃತಪಟ್ಟಿದ್ದರು. ಈ ಹಿನ್ನೆಲೆ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿಯಲ್ಲಿರುವ ಭುವನಾ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ, ಮೃತರ ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಭುವನಾ ಅವರ ಅಕಾಲಿಕ ನಿಧನದಿಂದ ಕಂಗಾಲಾಗಿರುವ ಕುಟುಂಬಸ್ಥರು, ಭುವನಾ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ರಯ. ತುಮಕೂರು ಜಿಲ್ಲಾಧಿಕಾರಿಗಳನ್ನ ಕೂಡಲೇ ಅಮಾನತು ಮಾಡಬೇಕು. ನಮ್ಮ ಕುಟುಂಬಕ್ಕೆ ಆದ ಅನ್ಯಾಯ ಬೇರಾರಿಗೂ ಆಗಬಾರದು ಎಂದು ಉಪ ಮುಖ್ಯಮಂತ್ರಿಗಳಲ್ಲಿ ಕಣ್ಣೀರುಡುತ್ತಾ ಮನವಿ ಮಾಡಿಕೊಂಡರು.

ಕುಟುಂಬದ ಅಳಲನ್ನು ಆಲಿಸಿದ ಡಿಸಿಎಂ, ʻಸರ್ಕಾರ ನಿಮ್ಮೊಂದಿಗಿದೆ. ಭುವನಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ನಿಯಮಾನುಸಾರ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸಿಗಬೇಕಾದ ಎಲ್ಲಾ ರೀತಿಯ ಪರಿಹಾರ ಮತ್ತು ಸವಲತ್ತುಗಳನ್ನು ಶೀಘ್ರದಲ್ಲೇ ಒದಗಿಸಿಕೊಡಲಾಗುವುದು, ಎಂದು ಭರವಸೆ ನೀಡಿದರು. ಇದನ್ನೂ ಓದಿ : ಮಲೆನಾಡು ಭಾಗದಲ್ಲಿ ಭಾರೀ ಮಳೆ; ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!

Related posts

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ..!

Kalpana Editor

ಮಾನದಂಡಗಳ ಅನ್ವಯವೇ ಶಾಶ್ವತ ನಿವಾಸ ಪ್ರಮಾಣಪತ್ರ – ಅಕ್ರಮ ನಿವಾಸಿಗಳು ಹೊರಕ್ಕೆ; ಡಿಸಿಎಂ ಜಿ.ಪರಮೇಶ್ವರ್

Kalpana Editor

ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; ನಕಲಿ ವೆಬ್‌ಸೈಟ್‌ಗಳು ಬಂದ್..!

kknewskannada1987@gmail.com