23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಸಾವು..!

ಕೊಪ್ಪಳ : ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.

ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ, ವೇಳೆ ಈ ಅಪಘಾತ ನಡೆದಿದೆ.

ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಇದನ್ನೂ ಓದಿ : ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ; ಸಸಿ ನೆಡುವ ಬೃಹತ್ ಅಭಿಯಾನ..!

Related posts

ಜಾನಕಿ ಅವರಿಗೆ ಸಂಗೀತವೇ ಉಸಿರಾದರೆ, ಜಾನಕಿಯನ್ನೇ ಉಸಿರಾಗಿಸಿಕೊಂಡಿದ್ದರು ರಾಮಪ್ರಸಾದ್

Kalpana Editor

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ..!

Kalpana Editor

ನ್ಯಾಯವಾಗಿ ಬದುಕಿದರೆ ಜೈಲಿನ ಭಯ ಯಾಕೆ..? ನನ್ನ ಪ್ರಶ್ನೆಗೆ ಉತ್ತರ ಕೊಡಿ – ಸಿಎಂಗೆ ನಿಖಿಲ್ ಸವಾಲು

Kalpana Editor