22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಆಷಾಢ ಮಾಸದ ಶುಕ್ರವಾರ ಹಿನ್ನೆಲೆ; ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಸಿಎಂ ಪತ್ನಿ

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಚಾಮುಂಡಿ ತಾಯಿಯ ಮೂಲ ವಿಗ್ರಹಕ್ಕೆ ಸೀರೆ ಕೊಟ್ಟು ಹರಕೆ ತೀರಿಸಿದ್ದಾರೆ. ಪತಿ ಸಿಎಂ ಆದರೆ ಆಷಾಢ ಶುಕ್ರವಾರದಂದು ಚಾಮುಂಡಿಗೆ ತಾಯಿಗೆ ಸೀರೆ ಉಡಿಸುತ್ತೇನೆ ಎಂದು ಡಿಕೆಶಿ ಪತ್ನಿ ಉಷಾ ಹರಕೆ ಹೊತ್ತಿದ್ದರು. ಪತಿ ಸಿಎಂ ಆಗುತ್ತಿದಂತೆ ಮೊದಲ ಆಷಾಢ ಶುಕ್ರವಾರದಂದೇ ಉಷಾ ಗುಲಾಬಿ ಮತ್ತು ಸಿಮೆಂಟ್ ಬಣ್ಣದ ರೇಷ್ಮೆ ಸೀರೆಯನ್ನು ತಾಯಿ ಚಾಮುಂಡೇಶ್ವರಿಗೆ ಕಾಣಿಕೆಯಾಗಿ ಕೊಟ್ಟಿದ್ದಾರೆ. ಸಿಎಂ ಪತ್ನಿ ಕಾಣಿಕೆಯಾಗಿ ಕೊಟ್ಟಿರುವ ಸೀರೆಯನ್ನು ಬೆಟ್ಟದ ಆಡಳಿತ ಮಂಡಳಿ ಚಾಮುಂಡಿ ತಾಯಿಗೆ ಉಡಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿಯ ದರ್ಶನ ಪಡೆದ ಉಷಾ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಮುಂಜಾನೇಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದು ನಾಗಲಕ್ಷ್ಮೀ ಅಲಂಕಾರದಿಂದ ಚಾಯಿ ಚಾಮುಂಡಿ ಕಂಗೊಳಿಸುತ್ತಿದ್ದಾಳೆ. ಚಾಮುಂಡಿ ತಾಯಿಯ ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದೆ.

ಈ ಬಾರಿ 2 ಸಾವಿರ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೇ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಚಾಮುಂಡಿ ಬೆಟ್ಟದ ದೇವಾಲಯದ ಸುತ್ತ ವಿಶೇಷ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಯತ್ನಾಳ್ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಜೊತೆ ಬೆಟ್ಟಕ್ಕೆ ಆಗಮಿಸಿದ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ : ಬಾಸ್‌ ಸಿನಿಮಾಗೆ ಗ್ರೀನ್‌ ಸಿಗ್ನಲ್‌ – ಹೈಕೋರ್ಟ್‌ನಲ್ಲಿ ದರ್ಶನ್‌ ಪತ್ನಿಗೆ ಸೋಲು..!

Related posts

ಚೆನ್ನಮ್ಮ ವಯಸ್ಸು 89; 9 ಅನ್ನೋದು ಗಂಡಾಂತರ – ಬ್ರಹ್ಮಾಂಡ ಗುರೂಜಿ

Kalpana Editor

76 ಕಲ್ಯಾಣ ಕರ್ನಾಟಕ ಪಿಡಿಓಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ; ಈಶ್ವರ ಖಂಡ್ರೆ

Kalpana Editor

ನೀಟ್ ಪೇಪರ್ ಲೀಕ್; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ – ಪ್ರಧಾನಿ ಮೋದಿ

Kalpana Editor