20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

ಬೆಂಗಳೂರು : ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಕೊಡಗು, ಹಾಸನ, ಧಾರವಾಡ, ಗದಗ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿರಲಿದ್ದು, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ : ಆತ್ಮಹತ್ಯೆಗೆ ಶರಣಾದ 17 ವರ್ಷದ ಮಹಿಳಾ ಕ್ರಿಕೆಟ್‌ ಆಟಗಾರ್ತಿ..

Related posts

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್

Kalpana Editor

ಹಿಡಕಲ್ ಜಲಾಶಯ ಭರ್ತಿ – ಇಂದು ನೀರು ಬಿಡುಗಡೆ ಸಾಧ್ಯತೆ..!

kknewskannada1987@gmail.com

ಎಸ್‍ಐಆರ್ ಮಹಾಸಂಪರ್ಕ ಅಭಿಯಾನ; ಒಂದು ಕೋಟಿ ಮನೆ ತಲುಪುವ ಗುರಿ – ಬಿ.ವೈ. ವಿಜಯೇಂದ್ರ

Kalpana Editor