23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಉಡುಪಿ, ಮಂಗಳೂರು ಸೇರಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್…!

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳೀಗೆ ಆರೆಂಜ್ ಅಲರ್ಟ್​ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಮತ್ತು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.

ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ : ಇಂದಿನಿಂದ ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ..!

Related posts

ವಿಧಾನಸಭೆಯಲ್ಲಿ ʻಎನ್‌ಕೌಂಟರ್‌ʼ ಸದ್ದು – ವಿಪಕ್ಷಗಳು ನಿಗಿ ನಿಗಿ, ಗದ್ದಲ ಕೋಲಾಹಲ..!

kknewskannada1987@gmail.com

80ನೇ ಸ್ವಾತಂತ್ರ‍್ಯ ದಿನಾಚರಣೆ; ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

kknewskannada1987@gmail.com

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಬಿರುಕುಗೊಂಡ ಬೃಹತ್ ತಡೆಗೋಡೆ..!

Kalpana Editor