23.5 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿದೇಶ

ಪ್ಯಾರಾಮೆಡಿಕಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ – ನಾಲ್ವರು ಬಂಧನ..!

ಜೈಪುರ : ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಜುನ್ಜುನುವಿನ ಎಸ್ ಕರಣ್ ಕಾಲೇಜಿನ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥ ಕೃಷ್ಣ ಕುಮಾರ್ ಸೈನಿ, ಎಸ್ ಕರಣ್ ಕಾಲೇಜಿನ ರೇಡಿಯಾಲಜಿ ವಿಭಾಗದ ಉಪನ್ಯಾಸಕ ಶಂಕರ್ ಲಾಲ್ ಜಾಟ್, ಪ್ರಭಾ ಮೆಮೋರಿಯಲ್ ಪಿಜಿ ಕಾಲೇಜಿನೊಂದಿಗೆ ಸಂಬಂಧ ಹೊಂದಿರುವ ರಾಮಕೃಷ್ಣ ಮಂಡಿವಾಲ್ ಮತ್ತು ಕಾಲೇಜಿನ ಆಡಳಿತಾಧಿಕಾರಿ ದೇವಕೃಷ್ಣ ಮಂಡಿವಾಲ್ ಬಂಧಿತರು.

ಜೈಪುರದ ಪ್ರಭಾ ದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ನಕಲಿನ ಬಗ್ಗೆ ಜೂನ್ 27 ರಂದು ಪೊಲೀಸರಿಗೆ ಗುಪ್ತಚರ ಮಾಹಿತಿ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಕಿರಣ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಮೊದಲ ವರ್ಷದಲ್ಲಿ ಪಾಸ್‌ ಆಗದೇ ಉಳಿದಿದ್ದರು. ಅವರನ್ನು ಪಾಸ್‌ ಮಾಡಲು, ಆರೋಪಿಗಳು ಜೈಪುರ ಪರೀಕ್ಷಾ ಕೇಂದ್ರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ : ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್‌ – ಟ್ರ್ಯಾಕಿಂಗ್‌ ಸಿಸ್ಟಂ ಆಫ್‌ ಮಾಡಿ ಭಾರತಕ್ಕೆ ಹಡಗುಗಳ ಪ್ರಯಾಣ

Related posts

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ; ವಿದ್ಯಾರ್ಥಿಗಳ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ – ಪ್ರಧಾನಿ ಮೋದಿ

Kalpana Editor

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಉಪಕರಣಗಳು ಹಾಗೂ ಸಿಬ್ಬಂದಿ ಸನ್ನದ್ಧತಾ ಕಾರ್ಯಕ್ರಮ..!

Kalpana Editor

ಸಿಜೆಪಿ ಪ್ರತಿಭಟನೆಯಲ್ಲಿ ಹಿಂಸಾಚಾರ; ಆರೋಪಿಗಳ ಪಾಸ್‌ಪೋರ್ಟ್ ರದ್ದು..!

Kalpana Editor