22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ..!

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಶಾಸಕರು (ಓರ್ವ ಎಂ.ಎಲ್‌ಸಿ ಸೇರಿ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

ಜಿ. ಪರಮೇಶ್ವರ್‌ ರಾಜ್ಯದ ಡಿಸಿಎಂ ಆಗಿ ಡಾ. ಬಿ.ಆರ್‌ ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಸಂಪುಟ ದರ್ಜೆ ಸಚಿವರಾಗಿ ಕೆ.ಹೆಚ್‌ ಮುನಿಯಪ್ಪ, ಕೆ.ಜೆ ಜಾರ್ಜ್‌, ಬೈರತಿ ಸುರೇಶ್‌, ಶರಣಪ್ರಕಾಶ್‌ ಪಾಟೀಲ್‌ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ್ರೆ, ಎಂ.ಬಿ ಪಾಟೀಲ್‌ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ‌ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಇದನ್ನೂ ಓದಿ : ಸ್ಥಾನಮಾನ ಹೆಚ್ಚಾದಂತೆ ವಿರೋಧಿಗಳೂ ಹೆಚ್ಚಾಗುತ್ತಾರೆ; ವಿವಾದದಲ್ಲಿ ರಣವೀರ್‌ಗೆ ಕಂಗನಾ ಬೆಂಬಲ..!

ಇನ್ನುಳಿದಂತೆ ರಾಮಲಿಂಗಾ ರೆಡ್ಡಿ, ಸತೀಶ್‌ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ, ಯು.ಟಿ ಖಾದರ್‌, ಈಶ್ವರ್‌ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ಶೀಘ್ರದಲ್ಲೇ ಎಲ್ಲಾ ಸಂಪುಟ ಸಚಿವರಿಗೆ ಖಾತೆ ನಿಗದಿ ಮಾಡಲಾಗುತ್ತದೆ.

ಪರಮೇಶ್ವರ್‌ (ಡಿಸಿಎಂ), ಕೆ.ಹೆಚ್‌ ಮುನಿಯಪ್ಪ, ಕೆ.ಜೆ ಜಾರ್ಜ್‌, ಎಂ.ಬಿ ಪಾಟೀಲ್‌, ರಾಮಲಿಂಗಾ ರೆಡ್ಡಿ, ಸತೀಶ್‌ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ, ಯು.ಟಿ ಖಾದರ್‌, ಈಶ್ವರ್‌ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್‌, ಶರಣ ಪ್ರಕಾಶ್‌ ಪಾಟೀಲ್‌.., ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Related posts

ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ, ಟೆಕ್ಕಿ ನಾಪತ್ತೆ..!

kknewskannada1987@gmail.com

ಬಾಲಿವುಡ್ ನಟಿ ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ..!

Kalpana Editor

ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ..!

Kalpana Editor