August 25, 2026
kranthikidi.com
ತಾಜಾಸುದ್ದಿರಾಜ್ಯ

ಪರಪ್ಪನ ಅಗ್ರಹಾರ; ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ..!

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್, ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿದ್ದು, ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ : ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶವನ್ನು ನಂಬಬೇಡಿ; ಪ್ರಹ್ಲಾದ್ ಜೋಶಿ

Related posts

ಕಾವೇರಿ ನೀರು ನಿರ್ವಹಣೆ; ಸರ್ಕಾರದ ಧೋರಣೆಗೆ ತೀವ್ರ ಅಸಮಾಧಾನ – ಬಸವರಾಜ ಬೊಮ್ಮಾಯಿ

Kalpana Editor

ಎಸ್‍ಐಆರ್ ವಿಷಯದಲ್ಲಿ ಅಧಿಕಾರಿಗಳ ದುರ್ಬಳಕೆಗೆ, ಕೋರ್ ಕಮಿಟಿ ಸಭೆ ಆಕ್ಷೇಪ – ಬಿ.ವೈ.ವಿಜಯೇಂದ್ರ

Kalpana Editor

ಕನ್ನಡಿಗರನ್ನು ಮತ್ತಷ್ಟು ಕುಡುಕರನ್ನಾಗಿಸುತ್ತೀರಾ..? ಎಎಪಿ ಮಾರ್ಮಿಕ ಪ್ರಶ್ನೆ – ಎಎಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್

Kalpana Editor