August 26, 2026
kranthikidi.com
ತಾಜಾಸುದ್ದಿರಾಜ್ಯ

ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ..!

ಬೆಂಗಳೂರು : ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.

ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ ಯುವಕರು ರಸ್ತೆಯ ಮಧ್ಯೆ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್‌ಗೂ ದಾರಿ ಬಿಡದೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ತನಿಖೆ ನಡೆಸಿ, ವೀಲಿಂಗ್ ಮಾಡಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಈಗಾಗಲೇ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಮುಂದುವರಿದಿದೆ. ಇದನ್ನೂ ಓದಿ : ಟೆಲಿಗ್ರಾಂ ರೇಪ್ ನೆಟ್‌ವರ್ಕ್ – ಮಹಿಳೆಯರಿಗೆ ಡ್ರಗ್ಸ್ ನೀಡಿ ಅತ್ಯಾಚಾರ..!

Related posts

ನಟ ಪ್ರಭಾಸ್ ಅಭಿನಯದ ಫೌಜಿ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

Kalpana Editor

ರಾತ್ರಿ ಮಲಗುವ ಮುನ್ನ, ಈ ಕೆಲಸ ಮಾಡಿ ನೆಮ್ಮದಿಯ ನಿದ್ರೆ ಮಾಡುವಿರಿ..!

kknewskannada1987@gmail.com

ಇನ್ಮುಂದೆ ನೀಟ್ ಪರೀಕ್ಷೆಗೆ, ಭಾರತೀಯ ಸೇನೆಯ ನೆರವು..!

Kalpana Editor