20.8 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ..!

ಬೆಂಗಳೂರು : ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್‌ಸಿಎಲ್‌ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.

ಮುಖ್ಯಮಂತ್ರಿಗಳನ್ನು ಮೆಟ್ರೋದಲ್ಲಿ ಕಂಡ ಸಾರ್ವಜನಿಕರು ಹಾಗೂ ಸಹಪ್ರಯಾಣಿಕರು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದರು. ಅನೇಕ ಮೆಟ್ರೋ ಪ್ರಯಾಣಿಕರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ರೈಲಿನಲ್ಲಿದ್ದ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿದ ಡಿ.ಕೆ. ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು. ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣದವರೆಗೆ ಮೆಟ್ರೋದಲ್ಲಿಯೇ ತೆರಳಿದ ಮುಖ್ಯಮಂತ್ರಿಗಳು, ಅಲ್ಲಿಂದ ಮುಂದೆ ರಸ್ತೆ ಮಾರ್ಗವಾಗಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ : ಸಿಎಂ ಆದ ಬಳಿಕ ಅಜ್ಜಯ್ಯನ ಮಠಕ್ಕೆ ಭೇಟಿ; ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದ್ದ ಡಿಕೆಶಿ

Related posts

ʻಕಾಕ್ರೋಚ್‌ʼ ಪ್ರತಿಭಟನೆ ವೇಳೆ ಮೋದಿ ವಿರುದ್ಧ ಪೋಸ್ಟ್‌ – ಮೆಟಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು..!

Kalpana Editor

“ಮಜಾಭಾರತ” ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!

Kalpana Editor

9 ಯೋಧರಿಗೆ ಕೀರ್ತಿ ಚಕ್ರ ಸೇರಿ 78 ಜನರಿಗೆ ಶೌರ್ಯ ಪ್ರಶಸ್ತಿ ಘೋಷಣೆ..!

kknewskannada1987@gmail.com