21.2 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜ್ಯ

ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ; ಪೊಲೀಸ್ ಕಾನ್ಸ್‌ಟೇಬಲ್ ಸಾವು..!

ರಾಯಚೂರು : ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ.

ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಡಿಎಆರ್ ಸಿಪಿಐ ವಾಹನ ಚಾಲಕರಾಗಿದ್ದರು. ಹೃದಯಾಘಾತದಿಂದ ಕರ್ತವ್ಯನಿರತ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ : ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌..!

Related posts

ನೀಟ್ ಪೇಪರ್ ಲೀಕ್; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ – ಪ್ರಧಾನಿ ಮೋದಿ

Kalpana Editor

ಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ; ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿ

kknewskannada1987@gmail.com

ಕರ್ನಾಟಕ ಬಂದ್‌ – ಮಂಡ್ಯ, ರಾಮನಗರದಲ್ಲಿ ಪ್ರತಿಭಟನೆಯ ಕಾವು..!

kknewskannada1987@gmail.com