22 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿವಿದೇಶ

ಕೊಲಂಬಿಯಾದಲ್ಲಿ ತೀವ್ರತೆಯ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 132ಕ್ಕೆ ಏರಿಕೆ..!

ಬೊಗೋಟಾ : ಪಶ್ಚಿಮ ಕೊಲಂಬಿಯಾದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಸಾವಿನ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಈ ಭೂಕಂಪವು ಭಾರೀ ಪ್ರಮಾಣದ ಹಾನಿಯನ್ನುಂಟು ಮಾಡಿದ್ದು, ಇದುವರೆಗೆ 132 ಜನರು ಪ್ರಾಣ ಕಳೆದುಕೊಂಡಿದ್ದು, 570ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆರೇರಾ ನಗರದಲ್ಲಿ ತೀವ್ರವಾಗಿ ಹಾನಿಯಾಗಿದ್ದು, ಈ ನಗರವೊಂದಲ್ಲೇ 60 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

1,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಕೆಲ ಕಟ್ಟಡಗಳು ಕುಸಿದುಬಿದ್ದಿವೆ. ಅಲ್ಲದೇ 18 ಆರೋಗ್ಯ ಕೇಂದ್ರಗಳು ಮತ್ತು 52 ಶಾಲೆಗಳಿಗೂ ಹಾನಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಟ್ಟು ಏಳು ವಿಮಾನ ನಿಲ್ದಾಣಗಳಲ್ಲಿ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಭೂಕಂಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೈ ಝುಮ್ ಎನ್ನುವಂತಿದೆ.

ಈ ಪರಿಸ್ಥಿತಿಯನ್ನು ಎದುರಿಸಲು ಅಧ್ಯಕ್ಷರು ತುರ್ತು ಸಭೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತಾವೇ ಖುದ್ದಾಗಿ ಮೇಲ್ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ. ರಾಜಧಾನಿ ಬೊಗೋಟಾದಿಂದ 100 ಜನರ ತಜ್ಞರ ರಕ್ಷಣಾ ತಂಡವನ್ನು ಮತ್ತು ಅಗತ್ಯ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಬೊಗೋಟಾದಿಂದ ಪಶ್ಚಿಮಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಸುಮಾರು 4,800 ಜನರಿರುವ ಸ್ಯಾನ್ ಜೋಸ್ ಡೆಲ್ ಪಾಲ್ಮರ್‌ನಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ ಸುಮಾರು 107 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಭೂಕಂಪದ ಕಂಪನಗಳು ನೆರೆಯ ಈಕ್ವೆಡಾರ್‌ಗೂ ಅನುಭವವಾಗಿವೆ. ಇದನ್ನೂ ಓದಿ : ಪಿಂಕ್ ಹಾಗೂ ಬ್ಲೂ ಲೈನ್‌ನ ಸಿಬಿಟಿಸಿ ವ್ಯವಸ್ಥೆಗೆ ಗ್ರೀನ್ ಸಿಗ್ನಲ್..!

Related posts

NCERT ಹೊಸ ಪಠ್ಯದಲ್ಲಿ ಮೊದಲ ಬಾರಿಗೆ SIR ಸೇರ್ಪಡೆ..!

Kalpana Editor

RSS ನೋಂದಣಿ ಬಗ್ಗೆ ಮೋಹನ್ ಭಾಗವತ್​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

Kalpana Editor

ಡೈರೆಕ್ಟರ್‌ ಬರ್ತ್‌ಡೇ ದಿನವೇ ‘ಟಾಕ್ಸಿಕ್ ಮೇಕಿಂಗ್’ ವಿಡಿಯೋ ರಿಲೀಸ್..!

Kalpana Editor