29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಪ್ರಜ್ವಲ್‌ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ – ಕಾರಾಗೃಹ ಇಲಾಖೆ..!

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರೋ ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಅಂತ ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ಅಧಿಕಾರ ವ್ಯಾಪ್ತಿಯೂ ಇಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಈಗಾಗಲೇ ಕುಟುಂಬಸ್ಥರು ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಕರೆತರುವ ಪ್ರಯತ್ನ ಮಾಡಿದ್ರು. ಕಾರಾಗೃಹ ಇಲಾಖೆ ಅಧಿಕಾರ ವ್ಯಾಪ್ತಿ ಇಲ್ಲ ಎಂದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸೋ ಪ್ಲ್ಯಾನ್‌ ಅಲ್ಲಿ ಇದ್ದಾರೆ. 15 ದಿನಗಳ ಕಾಲ ಪೆರೋಲ್ ಸಿಕ್ಕಿದ್ರೆ 30ನೇ ತಾರೀಖು ಪುಣ್ಯ ತಿಥಿ ಇದೆ. ಕುಟುಂಬ ಅವತ್ತಿನ ಬದಲಾಗಿ ಬೇರೊಂದು ದಿನ ಸಮಾಧಿಯ ಬಳಿ ಕರೆದುಕೊಂಡು ಹೋಗಿ ಪೂಜೆ ನೆರವೇರಿಸೋ ತಯಾರಿಯಲ್ಲಿದೆ.

ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಯ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಈ ಭೇಟಿಯ ವೇಳೆ ಕಾರಾಗೃಹದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಯಾವುದೇ ಕಾರಣದಿಂದ ಭೇಟಿಗೆ ಅವಕಾಶ ನಿರಾಕರಿಸಿದರೆ, ಅದರ ಬಗ್ಗೆ ಅಪರಾಧಿಗೆ ಸೂಕ್ತ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದೂ ಆದೇಶಿಸಿದೆ. ಇದನ್ನೂ ಓದಿ : ನೀಟ್ ಪ್ರತಿಭಟನೆ ಬಿಸಿ: ರಾಮಾಯಣ ಟ್ರೇಲರ್ ಬಿಡುಗಡೆ ಮುಂದಕ್ಕೆ..!

Related posts

ಸಿಎಂ ಆದ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಸಿಎಂ ಡಿಕೆ ಶಿವಕುಮಾರ್

Kalpana Editor

ಮಲಬದ್ಧತೆ ಸಮಸ್ಯೆ ಇದ್ದರೆ, ವಾಲ್ನಟ್ ತಿನ್ನಿವುದರಿಂದ ದೇಹಕ್ಕ್ ಒಳ್ಳೆಯದು..!

Kalpana Editor

ಪ್ರವಾಸಿಗರಿಗೆ ಎಚ್ಚರಿಕೆ; ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ಓಡಾಟ..!

Kalpana Editor