20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿದೇಶ

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ..!

ನವದೆಹಲಿ : ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಧ್ವಜಾರೋಹಣಕ್ಕೂ ಮುನ್ನ ಕೆಂಪು ಕೋಟೆಗೆ ತೆರಳುವ ಹಾದಿಯಲ್ಲಿ ಪ್ರಧಾನಮಂತ್ರಿಯವರು ರಾಜ್‌ಘಾಟ್‌ಗೆ ಭೇಟಿ ನೀಡಿ, ಗಾಂಧೀಜಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮಿಸಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ದಾರಿ ತೋರಿದ ಮಹಾತ್ಮ ಗಾಂಧೀಜಿಯವರ ತ್ಯಾಗವನ್ನು ಸ್ಮರಿಸುವುದು ಸ್ವಾತಂತ್ರ್ಯ ದಿನದ ಆಚರಣೆಯ ಮೊದಲ ಮತ್ತು ಪ್ರಮುಖ ಭಾಗವಾಗಿದೆ. ರಾಜ್‌ಘಾಟ್‌ನಲ್ಲಿ ನಮನ ಸಲ್ಲಿಸಿದ ನಂತರ, ಪ್ರಧಾನಿಯವರು ಚಾರಿತ್ರಿಕ ಕೆಂಪು ಕೋಟೆಗೆ ಆಗಮಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ, ಭಾಷಣ ಮಾಡಿದರು. ಇದನ್ನೂ ಓದಿ : 80ನೇ ಸ್ವಾತಂತ್ರ್ಯ ದಿನಾಚರಣೆ; ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

Related posts

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ; ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ ಅರ್ಜಿ

Kalpana Editor

ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ : ಈಶ್ವರ ಖಂಡ್ರೆ

Kalpana Editor

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ; ಹೆಚ್‌ಡಿಕೆ

Kalpana Editor