July 22, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಹೈಕಮಾಂಡ್‌ ಮುಂದೆ ಡಿಸಿಎಂ ಪ್ರಸ್ತಾಪ; ಸಂಪುಟ ವಿಸ್ತರಣೆ ಹೊಸ್ತಿಲಲ್ಲಿ ಡಿಕೆಶಿ ಮಾಸ್ಟರ್‌ಸ್ಟ್ರೋಕ್..!

ಬೆಂಗಳೂರು : ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡ ಬೆನ್ನಲ್ಲೇ ದೆಹಲಿ ತಲುಪಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಅಂಗಳದಲ್ಲಿ ಭಾರಿ ರಾಜಕೀಯ ದಾಳ ಉರುಳಿಸಲು ಸಜ್ಜಾಗಿದ್ದಾರೆ. ಪಕ್ಷದ ಒಳಗಿನ ಭಿನ್ನಮತ ಶಮನ ಹಾಗೂ ಭವಿಷ್ಯದ ರಾಜಕೀಯ ಲೆಕ್ಕಾಚಾರಗಳನ್ನು ಗಮನದಲ್ಲಿಟ್ಟುಕೊಂಡು ಡಿಕೆಶಿ ಸಿದ್ಧಪಡಿಸಿರುವ ‘ಮಾಸ್ಟರ್ ಪ್ಲಾನ್’ ಈಗ ಕೈ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಸಂಪುಟ ವಿಸ್ತರಣೆಯ ಜೊತೆಗೆ ರಾಜ್ಯದಲ್ಲಿ 3 ನೂತನ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಪ್ರಪೋಸಲ್ ಅನ್ನು ಹೈಕಮಾಂಡ್ ಮುಂದೆ ಡಿಕೆಶಿ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಒಂದು ಹಾಗೂ ಹಿಂದುಳಿದ ವರ್ಗಗಳ ನಾಯಕರಿಗೆ ಮತ್ತೊಂದು ಡಿಸಿಎಂ ಸ್ಥಾನ ನೀಡುವ ಮೂಲಕ ಜಾತಿ ಆಧಾರಿತ ಸಮತೋಲನ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

ನಾಯಕತ್ವ ಪೈಪೋಟಿ ನಿಯಂತ್ರಿಸುವುದು ಮತ್ತು ಪ್ರಮುಖ ಸಮುದಾಯಗಳನ್ನು ಒಲಿಸಿಕೊಂಡು ಮುಂದಿನ ಚುನಾವಣೆ ದೃಷ್ಟಿಯಿಂದ ಪಕ್ಷದ ನೆಲೆ ಗಟ್ಟಿ ಮಾಡಿಕೊಳ್ಳುವುದರ ಜೊತೆಗೆ ತಮ್ಮ ನಂತರದ ಉತ್ತರಾಧಿಕಾರತ್ವದ ರೇಸ್‌ನಲ್ಲಿರುವ ನಾಯಕರನ್ನು ಡಿಸಿಎಂ ಹುದ್ದೆಗಳ ಮೂಲಕ ಸರಿದೂಗಿಸಿ, ನಾಯಕತ್ವದ ಸಂಘರ್ಷಕ್ಕೆ ಕೊನೆ ಹಾಡಲು ಮುಂದಾಗಿದ್ದಾರೆ.

ಒಮ್ಮೆ ಸಿದ್ದರಾಮಯ್ಯ ಅವರ ತೀವ್ರ ಬೆಂಬಲಿಗರಾಗಿದ್ದು, ತಮ್ಮ ವಿರುದ್ಧ ಬ್ಯಾಟಿಂಗ್ ಮಾಡುತ್ತಿದ್ದ ನಾಯಕರನ್ನೇ ಈಗ ತಮ್ಮತ್ತ ಸೆಳೆದುಕೊಳ್ಳುವ ತಂತ್ರಕ್ಕೆ ಡಿಕೆಶಿ ಕೈಹಾಕಿದ್ದಾರೆ. ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಚಿವ ಕೆ.ಎನ್. ರಾಜಣ್ಣ ಹಾಗೂ ಜಮೀರ್ ಅಹ್ಮದ್ ಖಾನ್ ಅವರ ವಿಷಯದಲ್ಲಿ ಡಿಕೆಶಿ ಸಕಾರಾತ್ಮಕ ಧೋರಣೆ ತಳೆದಿದ್ದು, ಹೈಕಮಾಂಡ್ ಮಟ್ಟದಲ್ಲಿ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ. 2 ರಿಂದ 3 ಬಾರಿ ಗೆದ್ದಿರುವ ಅನುಭವಿ ಶಾಸಕರಿಗೂ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಲಿದೆ. ಪ್ರಾದೇಶಿಕ ಹಾಗೂ ಸಾಮಾಜಿಕ ಸಮೀಕರಣ ಸರಿದೂಗಿಸಲು ಇಬ್ಬರು ಶಾಸಕಿಯರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಯಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಹೊಸ ಮಾಸ್ಟರ್‌ಪ್ಲಾನ್ ಕೇವಲ ಸಂಪುಟ ವಿಸ್ತರಣೆಗೆ ಸೀಮಿತವಾಗಿಲ್ಲ; ಇದು ತಮ್ಮ ಅಧಿಕಾರದ ಅವಧಿಯನ್ನು ಸುಗಮಗೊಳಿಸಿಕೊಳ್ಳುವ ಮತ್ತು ಭವಿಷ್ಯದ 7 ವರ್ಷಗಳ ಸುದೀರ್ಘ ರಾಜಕೀಯ ಭವಿಷ್ಯವನ್ನು ಗಟ್ಟಿಮಾಡಿಕೊಳ್ಳುವ ತಂತ್ರ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಹೈಕಮಾಂಡ್ ಈ ಪ್ರಪೋಸಲ್‌ಗೆ ಗ್ರೀನ್ ಸಿಗ್ನಲ್ ನೀಡುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ : ಮಲೆನಾಡಲ್ಲಿ ಹೊಸ ಫಾರ್ಮ್‌ಹೌಸ್‌ ಖರೀದಿಸಿದ ನಟಿ ಸಪ್ತಮಿಗೌಡ

Related posts

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ – ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ..!

Kalpana Editor

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ – ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ; ಬಿ.ವೈ.ವಿಜಯೇಂದ್ರ

Kalpana Editor

ಹಳೆ ಬೇರು, ಹೊಸ ಚಿಗುರು ಫಾರ್ಮುಲಾ; ಯುವ ನಾಯಕರಿಗೆ ಮಂತ್ರಿಗಿರಿ ಪಟ್ಟಾ..?!

Kalpana Editor