29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ, ಪ್ರತಿಭಟನೆ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ..!

ಯಾದಗಿರಿ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಯಾದಗಿರಿಯ ಸುಭಾಷ್ ವೃತ್ತದಲ್ಲಿ ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ನನ್ನ ಸಾವಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರಣರಾಗುತ್ತಾರೆಂದು ಹೇಳಿ, ಸಾರ್ವಜನಿಕರ ಎದುರೇ ಕ್ರಿಮಿನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿಯೇ ಇದ್ದ ಇತರೆ ಪ್ರತಿಭಟನಾಕಾರರು ಹಾಗೂ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ತಡೆದು, ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ.

Related posts

ಪರಪ್ಪನ ಅಗ್ರಹಾರದಲ್ಲಿ ಒಂದೇ ಕಂಪನಿಯ ಫೋನ್‌ಗಳ ಪೂರೈಕೆಯ ಜಾಲ

kknewskannada1987@gmail.com

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು; ಡಿಕೆಶಿ ಪಟ್ಟಾಭಿಷೇಕಕ್ಕೆ ಟೈಂ ಫಿಕ್ಸ್‌..!

Kalpana Editor

ಸಂಪುಟ ವಿಸ್ತರಣೆ; ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ – ಯತೀಂದ್ರ

kknewskannada1987@gmail.com