26.4 C
ಬೆಂಗಳೂರು
August 3, 2026
kranthikidi.com
ತಾಜಾಸುದ್ದಿರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ; ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ..!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದ ವಿವಿಧ ಕನ್ನಡಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸಮೀಪ ಕಪ್ಪು ಬಾವುಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಲಿರುವ ವಾಟಾಳ್ ನಾಗರಾಜ್ ಅವರು, “ಕನ್ನಡಿಗರ ಕಣ್ಣೀರು ಕಾವೇರಿ ನೀರು. ರಾಜ್ಯದಲ್ಲೇ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪನ್ನು ಕರ್ನಾಟಕ ತೀವ್ರವಾಗಿ ತಿರಸ್ಕರಿಸಬೇಕು” ಎಂದು ಆಗ್ರಹಿಸಲಿದ್ದಾರೆ.

ಪ್ರತಿಭಟನೆಯಲ್ಲಿ ಮಂಡಿಸಲಾಗುತ್ತಿರುವ ಪ್ರಮುಖ ಬೇಡಿಕೆಗಳು ಹೀಗಿವೆ: – ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪು ತಿರಸ್ಕರಿಸಬೇಕು. – ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು. – ಮೇಕೆದಾಟು ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು. – ಮಹಾದಾಯಿ–ಕಳಸ ಬಂಡೂರಿ ಯೋಜನೆ ಕಾರ್ಯಗತಗೊಳಿಸಬೇಕು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು. – ಎಂ.ಇ.ಎಸ್. ಸಂಘಟನೆಯನ್ನು ನಿಷೇಧಿಸಬೇಕು. ಗಡಿನಾಡು ಬೆಳಗಾವಿ ಹಾಗೂ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. – ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಹಾಗೂ ಬ್ಯಾಂಕ್‌ಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು.

ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗೀಕರಣ ಮಾಡಬಾರದು. – ಗಡಿನಾಡಿನ ಕನ್ನಡ ಶಾಲೆಗಳಿಗೆ ವಾರ್ಷಿಕ ₹500 ಕೋಟಿ ಅನುದಾನ ನೀಡಬೇಕು. – ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು. – ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಪರಭಾಷೆಗಳ ದಬ್ಬಾಳಿಕೆಯನ್ನು ತಡೆಯಬೇಕು.

ಬಿಡದಿ ಉಪನಗರ ಯೋಜನೆ ಕೈಬಿಡಬೇಕು ಹಾಗೂ ಆನೇಕಲ್ ಮತ್ತು ಬಿಡದಿ ರೈತರ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಹಿಂತೆಗೆದುಕೊಳ್ಳಬೇಕು. – ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಮರ್ಪಕ ಸ್ಥಾನಮಾನ ನೀಡಬೇಕು. – ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. – ಪೊಲೀಸ್ ಸಿಬ್ಬಂದಿಯನ್ನು ಅವರವರ ಮೂಲ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು.

ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಘೇರಾವ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಕಪ್ಪು ಬಾವುಟ ಪ್ರದರ್ಶನ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಮಾಧ್ಯಮ ಸಂಸ್ಥೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷ ಮನವಿ ಮಾಡಿದೆ. ಇದನ್ನೂ ಓದಿ : ಪೌರಕಾರ್ಮಿಕ ದಂಪತಿಯ ಪುತ್ರನಿಗೂ ಸಿಕ್ತು; ಸಚಿವ ಸ್ಥಾನ..!

Related posts

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಮಂಜು ವಿರುದ್ಧ ಎಫ್‌ಐಆರ್‌

Kalpana Editor

ಎಸ್‌ಐಆರ್‌ ಸಮೀಕ್ಷೆ; ಅಧಿಕಾರಿಯ ಮೇಲೆ ಹಲ್ಲೆ – ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌..!

Kalpana Editor

ಬೀದರ್ ಪೊಲೀಸರಿಂದ ಕೋಟಿ ಮೌಲ್ಯದ ಮಾದಕ ವಸ್ತು ನಾಶ..!

Kalpana Editor