ಕೊಪ್ಪಳ : ಮೂರು ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಮಂತ್ರಿಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ತಿಳಿಸಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ.
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ಜ್ಯೋತಿ ಗೊಂಡಬಾಳ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ಅವರಿಗೆ ರಾಜೀನಾಮೆ ನೀಡಿದ್ದರು.
75 ವರ್ಷವಾದರೂ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಮೂರು ಬಾರಿ ಗೆದ್ದಿರೋ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದೇ ಇರೋದು ನಮಗೆ ಬೇಸರವಾಗಿದೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ : ಎಐ, ಡೀಪ್ಫೇಕ್ ಮಾಡಿದ್ರೆ ಹುಷಾರ್ – ನಟಿ ಮೃಣಾಲ್ ಠಾಕೂರ್ ವಾರ್ನಿಂಗ್..!
